December 4, 2024

Bhavana Tv

Its Your Channel

ಗ್ರಾಮ ಸೇವಾ ಸಂಸ್ಥೆಯು ಸುಗಮ್ಯಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಸುಸಜ್ಜಿತ ಹೈಟೆಕ್ ಕಂಪ್ಯೂಟರ್ ಲ್ಯಾಬ್ ಅನ್ನು ಕೊಡುಗೆ

ಕೃಷ್ಣರಾಜಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಗೆ ಮೈಸೂರಿನ ಗ್ರಾಮ ಸೇವಾ ಸಂಸ್ಥೆಯು ಸುಗಮ್ಯಶಿಕ್ಷಾ ಅಭಿಯಾನ ಯೋಜನೆಯಡಿಯಲ್ಲಿ ಸುಸಜ್ಜಿತ ಹೈಟೆಕ್ ಕಂಪ್ಯೂಟರ್ ಲ್ಯಾಬ್ ಅನ್ನು ಕೊಡುಗೆಯಾಗಿ ನೀಡಿದೆ…

ಲೋಕಾರ್ಪಣೆಗೊಂಡ ಕಂಪ್ಯೂಟರ್ ಲ್ಯಾಬ್ ಅನ್ನು ಕ್ಷೇತ್ರಶಿಕ್ಷಣಾಧಿಕಾರಿ ಹೆಚ್.ಸುಂದರ್ ಉದ್ಘಾಟಿಸಿದರು…
ಮಕ್ಕಳ ಶೈಕ್ಷಣಿಕ ವಿಕಾಸಕ್ಕೆ ಇಂದಿನ ದಿನಮಾನದಲ್ಲಿ ಮಕ್ಕಳು ಕಂಪ್ಯೂಟರ್ ಜ್ಞಾನವನ್ನು ಪಡೆಯುವುದು ಅತೀ ಅಗತ್ಯವಾಗಿದೆ..ಈ ದಿಕ್ಕಿನಲ್ಲಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಗ್ರಾಮ ಸೇವಾ ಸಂಸ್ಥೆಯು ೨೦ ಕಂಪ್ಯೂಟರ್ ಗಳು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸುಗಮ್ಯಶಿಕ್ಷಾ ಕಾರ್ಯಕ್ರಮದ ಅಡಿಯಲ್ಲಿ ಒದಗಿಸಿಕೊಟ್ಟಿದೆ..
ಸಂಸ್ಥೆಯ ಸೇವಾ ಕಾರ್ಯವನ್ನು ಬಿಇಓ ಸುಂದರ್ ಶ್ಲಾಘಿಸಿದ್ದಾರೆ..ಈ ಸಂದರ್ಭದಲ್ಲಿ ಕೆಪಿಎಸ್ ಸ್ಕೂಲ್ ಪ್ರಾಂಶುಪಾಲ ಡಿ.ಬಿ.ಸತ್ಯಾ, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಕ್ಷೇತ್ರಸಮನ್ವಯಾಧಿಕಾರಿ ಲಿಂಗರಾಜು, ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ್, ಸುಗಮ್ಯಶಿಕ್ಷ ಯೋಜನೆಯ ಜಿಲ್ಲಾ ಸಂಯೋಜಕ ಮಲ್ಲಿಕಾರ್ಜುನ್ ಮತ್ತಿತರರು ಉಪಸ್ಥಿತರಿದ್ದರು….

error: