April 27, 2024

Bhavana Tv

Its Your Channel

ಭಟ್ಕಳ ಸರ್ಕಾರಿ ಆಸ್ಪತ್ರೆ ಸಾರ್ವಜನಿಕರ ಸೇವೆಗೆ ಲಭ್ಯ

ಭಟ್ಕಳ: ಕೋವಿಡ್-19 ಆಸ್ಪತ್ರೆಯಾಗಿ ಬದಲಾಗಿದ್ದ ಭಟ್ಕಳದ ಸರ್ಕಾರಿ ಆಸ್ಪತ್ರೆ ಜೂನ್‌ 1ರಿಂದ ಸಾರ್ವಜನಿಕರ ಆರೋಗ್ಯ ಸೇವೆಗೆ ಲಭ್ಯವಾಗಿದೆ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ತಿಳಿಸಿದ್ದಾರೆ.

ಭಟ್ಕಳದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ದಿನದಿಂದ ಕೋವಿಡ್ 19 ಆಸ್ಪತ್ರೆಯಾಗಿ ಬದಲಿಸಲಾಗಿತ್ತು. ಇದೀಗ ಸೋಂಕಿತರು ಗುಣಮುಖರಾದ ಹಿನ್ನೆಲೆಯಲ್ಲಿ ಪುನಃ ಸಾರ್ವಜನಿಕರ ಸೇವೆಗೆ ತೆರೆದುಕೊಂಡಿದೆ. ಆಸ್ಪತ್ರೆಯಲ್ಲಿ ಇನ್ನು ಮುಂದೆ ಕೊರೊನಾ ಚಿಕಿತ್ಸೆಗಾಗಿಯೇ 16 ಹಾಸಿಗೆಯುಳ್ಳ ಪ್ರತ್ಯೇಕ ವಾರ್ಡ್‌ ಅನ್ನು ಮಾಡಲಾಗಿದ್ದು, ಇಲ್ಲಿಗೆ ಹೋಗಿ ಬರುವ ಮಾರ್ಗವನ್ನು ಸಹ ಪ್ರತ್ಯೇಕಿಸಲಾಗಿದೆ. ಕೊರೊನಾ ಸೋಂಕಿತರು ಬಂದರೆ ಅಗತ್ಯವಿದ್ದವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತದೆಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

error: