May 18, 2024

Bhavana Tv

Its Your Channel

ಜಿಲ್ಲೆಯಲ್ಲಿ ಜೂನ್ 8 ರಿಂದ ತಾತ್ಕಾಲಿಕ ಮರಳುಗಾರಿಕೆ ಸ್ಥಗಿತ

ಕಾರವಾರ: ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದ್ದು, ಮಳೆಗಾಲದ ಅವದಿಯಲ್ಲಿ ಮೀನು ಮತ್ತು ಇತರೆ ಜಲಚರಗಳು ಮೊಟ್ಟೆ ಇಡುವ ಹಾಗೂ ಸಂತಾನೋತ್ಪತ್ತಿ ಮಾಡುವ ಹಿನ್ನಲೆಯಲ್ಲಿ ಜೂನ 8 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೂ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿ ಮರಳು ತೆಗೆಯುವಿಕೆ ಮತ್ತು ಸಾಗಾಣಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಬೆಂಗಳೂರು ಇವರು 2020 ಮಾರ್ಚ ತಿಂಗಳಲ್ಲಿ ನೀಡಿರುವ ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರದಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿಪಾತ್ರಗಳಲ್ಲಿನ ಮರಳು ದಿಬ್ಬಗಳಿಂದ ಮರಳು ತೆಗೆಯುವಿಕೆ/ಸಾಗಾಣಿಕೆ ಮಾಡಲು ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ತಾತ್ಕಾಲಿಕ ಮರಳು ಪರವಾನಿಗೆ ನೀಡಲಾಗಿದ್ದನ್ನು ಸ್ಥಗಿತಗೊಳಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: