
ಭಟ್ಕಳ: ಇತ್ತೀಚಿಗೆ ಭಾರತ ಚೀನಾ ಗಡಿಪ್ರದೇಶ ಗಲ್ವಾನ್ ಕಣಿವೆಯಲ್ಲಿ ಚೀನಾ ಕುಕೃತ್ಯಕ್ಕೆ ಹುತಾತ್ಮರಾದ 20 ಸೈನಿಕರಿಗೆ ಭಟ್ಕಳ ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ, ಭಟ್ಕಳ ಬಿಜೆಪಿ ಅಧ್ಯಕ್ಷ ಸುಬ್ರಾಯ ದೇವಡಿಗ, ಭಟ್ಕಳ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಭಟ್ಕಳ ಜೆಡಿಎಸ್ ಘಟಕದ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ, ಭಟ್ಕಳ ನಿಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಮ್.ಆರ್.ನಾಯ್ಕ, ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್, ಗೋವಿಂದ ನಾಯ್ಕ, ಶ್ರೀಧರ ನಾಯ್ಕ ಆಸರಕೇರಿ, ಕೃಷ್ಣ ನಾಯ್ಕ ಆಸರಕೇರಿ, ವಿಠ್ಠಲ್ ನಾಯ್ಕ, ಮಾಜಿ ಸೈನಿಕ ಎಮ್.ಡಿ.ಫಕ್ಕಿ ಮೊದಲಾದವರು ಗಲ್ವಾನ್ ಘಟನೆಯನ್ನು ಖಂಡಿಸಿ ಮಾತನಾಡಿದರು. ಚೀನಾ ನಿರ್ಮಿತ ವಸ್ತುಗಳನ್ನು ಬಹಿಷ್ಕರಿಸುವ ಮೂಲಕ ಆರ್ಥಿಕವಾಗಿಯೂ ತಕ್ಕ ಪಾಠ ಕಲಿಸಬೇಕಾದ ಅಗತ್ಯ ಇದೆ ಎಂದು ಪ್ರತಿಪಾದಿಸಿದರು. ಮಾಜಿ ಸೈನಿಕ ಶ್ರೀಕಾಂತ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಸೈನಿಕರಾದ ರಾಮಾ ನಾಯ್ಕ, ನಾರಾಯಣ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.