September 18, 2024

Bhavana Tv

Its Your Channel

ಪ್ರೊ.ವಿಷ್ಣು ಜೋಶಿ ಅವರ ನಿದನಕ್ಕೆ ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಉತ್ತರ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಹಿರಿಯ ಸದಸ್ಯರೂ ಆಗಿರುವ ವಿಷ್ಣು ಜೋಶಿ ಅವರು ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದವರು. ತಮ್ಮ ಪತ್ರಿಕಾ ಜೀವನದಲ್ಲಿ ಎಲ್ಲರೊಂದಿಗೆ ಸ್ನೇಹಮಯಿಯಾಗಿ ಇದ್ದ ಅವರು ಧಾರ್ಮಿಕ, ಸಾಂಸ್ಕೃತಿಕ ಉಪನ್ಯಾಸಗಳ ಮೂಲಕ ಜಿಲ್ಲೆಯಷ್ಟೇ ಅಲ್ಲ ಬೇರೆ ಬೇರೆ ಜಿಲ್ಲೆಗಳಲ್ಲಿ ತಮ್ಮ ಅಭಿಮಾನಿಗಳನ್ನು ಹೊಂದಿದ್ದರು. ಸತತವಾಗಿ ಲೇಖನಗಳನ್ನು ಬರೆಯುವ ಮೂಲಕ ಯುವ ಓದುಗರಿಗೆ ಆದರ್ಶರಾಗಿದ್ದ ಅವರ ನಿದನದಿಂದ ಅಪಾರ ದು:ಖವಾಗಿದ್ದು ಅವರ ಆತ್ಮಕ್ಕೆ ಭಗವಂತನ ಕೃಪೆಯಿಂದ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ದು:ಖ ಸಹಿಸುವ ಶಕ್ತಿ ದೊರೆಯಲಿ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ, ರಾಜ್ಯ ಸಮಿತಿ ಸದಸ್ಯ ಸುಬ್ರಾಯ ಭಟ್ ಬಕ್ಕಳ ಹಾಗೂ ಪದಾಧಿಕಾರಿಗಳು ಹಾರೈಸಿದ್ದಾರೆ.

error: