April 5, 2025

Bhavana Tv

Its Your Channel

ಭಟ್ಕಳ ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿನಿ ಹೆಬಳೆ ಗ್ರಾಮದ ಹೊನ್ನೆಗದ್ದೆಯ ಲೀಲಾ ಲಿಂಗಯ್ಯ ಮೊಗೇರ ಶನಿವಾರ ಅಕಾಲಿಕವಾಗಿ ನಿಧನ

ಭಟ್ಕಳ ; ಅವರಿಗೆ 24 ವರ್ಷ ವಯಸ್ಸಾಗಿತ್ತು. ಸದ್ಯ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಕೋವಿಡ್ 19 ಪರಿಸ್ಥಿತಿಯಿಂದಾಗಿ ಸರಿಯಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೇ ಇರುವುದರಿಂದ ಆರೋಗ್ಯ ಕೈಕೊಟ್ಟಿದೆ. ಪ್ರಾಥಮಿಕ, ಪ್ರೌಢ ಹಾಗೂ ಪದವಿ ತರಗತಿಗಳಲ್ಲೂ ಪ್ರತಿಭಾನ್ವಿತ ವಿದ್ಯಾರ್ಥಿಯೆಂದೇ ಗುರುತಿಸಿಕೊಂಡಿದ್ದಳು. ಅನಾರೋಗ್ಯದ ಕಾರಣಕ್ಕೆ ಇಂಜಿನೀಯರಿಂಗ್ ಶಿಕ್ಷಣ ಮೊಟಕುಗೊಳಿಸಬೇಕಾದ ಪರಿಸ್ಥಿತಿ ಬಂದರೂ ಬಳಿಕ ಚೇತರಿಸಿಕೊಂಡು ಭಟ್ಕಳದ ಅಂಜುಮನ್ ಮಹಿಳಾ ಪದವಿ ಕಾಲೇಜಿನಲ್ಲಿ ಬಿಎಸ್ಸಿ 4ನೇ ಸೆಮಿಸ್ಟರ್ ಓದುತ್ತಿದ್ದಳು. ಸದಾ ಓದಬೇಕು, ಮುಂದೆ ಬರಬೇಕೆಂಬ ಗುರಿ ಇಟ್ಟುಕೊಂಡಿದ್ದ ಲೀಲಾ ಇಹಲೋಕ ತ್ಯಜಿಸಿದ್ದಾಳೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ.

error: