May 16, 2024

Bhavana Tv

Its Your Channel

ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸ್ ಸಿಬ್ಬಂದಿಗೆ ತಗುಲಿದ ಸೋಂಕು: ಪೊಲೀಸ್ ಠಾಣೆ ಸೀಲ್ ಡೌನ್

ಭಟ್ಕಳ: ತಾಲೂಕಿನಲ್ಲಿ ಶುಕ್ರವಾರ ಒಟ್ಟು ಒಂಬತ್ತು ಪ್ರಕರಣ ಪತ್ತೆಯಾಗಿದ್ದು, ಭಟ್ಕಳ ಗ್ರಾಮೀಣ ಠಾಣೆ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಶುಕ್ರವಾರ ಗ್ರಾಮೀಣ ಠಾಣೆಯನ್ನು ಠಾಣೆ ಸೀಲ್ ಡೌನ್ ಮಾಡಲಾಗಿದೆ
ತಾಲೂಕಿನ 30,39,42,52,58,59 ವರ್ಷದ ಪುರುಷ . 24 ವರ್ಷದ ಯುವತಿ, 34 ವರ್ಷದ ಮಹಿಳೆ ಹಾಗೂ 4 ವರ್ಷದ ಹೆಣ್ಣು ಮಗುವಿಗೆ ಸೋಂಕು ಇರುವುದು ಪತ್ತೆಯಾಗಿದೆ.
ತಾಲೂಕಾಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 58,59 ವರ್ಷದ ಸಿಬ್ಬಂದಿ ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಠಾಣೆ ಕರ್ತವ್ಯ ನಿರ್ವಹಿಸುತ್ತಿದ್ದ 39 ವರ್ಷದ ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆ. ಸಿಬ್ಬಂದಿಗೆ ಸೋಂಕು ದೃಢಪಟ್ಟ ಬಗ್ಗೆ ತಿಳಿಯುತ್ತಿದ್ದಂತೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ

error: