
ಕಾರವಾರ: ಧಾರ್ಮಿಕ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅನಧಿಕೃತ ಪ್ರಾಣಿ ಹತ್ಯೆ, ಸಾಗಾಣಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಭೆಯನ್ನು ನಡೆಸಲಾಯಿತು.
ಕರ್ನಾಟಕ ಗೋವಧೆ ಪ್ರತಿಬಂಧಕ ಅಧಿನಿಯಮ 1964 ಅನ್ವಯ ಯಾವುದೇ ಜಾನುವಾರುಗಳನ್ನು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಾಗಾಟ ಮಾಡುವಾಗ ಪಶುವೈದ್ಯರಿಂದ ಅಧಿಕೃತ ಪ್ರಮಾಣ ಪತ್ರ ಇರಬೇಕಾಗುತ್ತದೆ ಹಾಗೂ ಪ್ರತಿಯೊಂದು ಜಾನುವಾರ ಸಾಗಾಟ ಮಾಡುವಾಗ ವಾಹನದಲ್ಲಿ ಕನಿಷ್ಟ 2 Sq.mt ಸ್ಥಳಾವಕಾಶ ಇರಬೇಕಾಗುತ್ತದೆ ಎಂದರು.
ಪ್ರಾಣಿಹಿಂಸೆ ಪ್ರತಿಬಂಧಕ ಅಧಿನಿಯಮ 1960ರ ಪ್ರಕಾರ ಯಾವುದೇ ಆಕಳು, ಆಕಳು ಕರುಗಳನ್ನು ರಾಜ್ಯದಲ್ಲಿ ವಧೆ ಮಾಡತಕ್ಕದ್ದಲ್ಲ ಅಥವಾ ವಧೆಗಾಗಿ ಹೊರ ರಾಜ್ಯಕ್ಕೆ ಸಾಗಾಣಿಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅನಧಿಕೃತವಾಗಿ ಜಾನುವಾರುಗಳ ಸಾಗಾಣಿಕೆ, ವಧೆ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆರಕ್ಷಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ರೋಶನ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕರಾದ ಡಾ.ನಂದಕುಮಾರ ಪೈ ಹಾಗೂ ಇತರರು ಉಪಸ್ಥಿತರಿದ್ದರು
More Stories
ಎಐಟಿಎಮ್ ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಎಐಟಿಎಮ್ ಭಟ್ಕಳದಲ್ಲಿ ಉದ್ಘಾಟನೆ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ