19-2-2020 Honavar
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಬಿಎಂಟಿಸಿ , ಕೆಎಸ್‌ಆರ್ ಟಿಸಿ ನೌಕರರು ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದು , ಬಸ್ ಸಂಚಾರ ವ್ಯತ್ಯಯವಾಗುವ ಎಲ್ಲಾ ಸಾಧ್ಯತೆ ಇದೆ ಎನ್ನಲಾಗಿದೆ.
ಹೀಗಾಗಿ ಬಸ್ ಗಳು ರಸ್ತೆಗಿಳಿಯುವುದು ಅನುಮಾನ . ಹೊರ ಊರುಗಳಿಗೆ ಹೋಗಬೇಕೆಂದುಕೊಂಡವರು ಒಮ್ಮೆ ಯೋಚಿಸುವುದು ಒಳಿತು.
ಹೌದು, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ತಮ್ಮ ಹಲವು ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಹೀಗಾಗಿ ಪ್ರಯಾಣಿಕರು ಪರಿಸ್ಥಿತಿ ನೋಡಿಕೊಂಡು ದೂರದ ಊರಿಗೆ ಪ್ರಯಾಣ ಬೆಳೆಸುವುದು ಒಳಿತು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದು, ಪ್ರತಿಭಟನೆಯಲ್ಲಿ ಪಾಟೀಲ್ ಪುಟ್ಟಪ್ಪ, ಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಕೂಡ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಎಂಟಿಸಿ ನೌಕರರ ಒತ್ತಾಯಕ್ಕೆ ಮಣಿಯದೇ ಇದ್ದ ಕಾರಣ ಮತ್ತೆ ಬಿಎಂಟಿಸಿ ನೌಕರರು ಉಪವಾಸ ಸತ್ಯಾಗ್ರಹ ಮಾಡುವುದರ ಮೂಲಕ ಸರ್ಕಾರದ ಮೇಲೆ ಒತ್ತಡ ಏರಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
More Stories
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.
ತುಳುನಾಡಿನ ಕಾರಣೀಕ ಮೆರೆದ ಕಲ್ಜಿಗ ಸಿನೇಮಾ, ಕಾಂತಾರದ ಬೆನ್ನಿಗೇ ಮತ್ತೊಂದು ಕಲಾತ್ಮಕ ಚಿತ್ರ ಕೊಟ್ಟ ಕರಾವಳಿ