May 19, 2024

Bhavana Tv

Its Your Channel

ಪುರಸಭಾ ವ್ಯಾಪ್ತಿಯ ರಸ್ತೆ ಸುಧಾರಣೆಗೆ ಸರ್ಕಾರದಿಂದ ೭.೫೦ ಕೋಟಿ ರೂ. ವಿಶೇಷ ಅನುದಾನ ಮಂಜೂರಿ ; ಶಾಸಕ ದಿನಕರ ಶೆಟ್ಟಿ.

ಕುಮಟಾ: ಪುರಸಭಾ ವ್ಯಾಪ್ತಿಯ ರಸ್ತೆ ಸುಧಾರಣೆಗೆ ಸರ್ಕಾರದಿಂದ ೭.೫೦ ಕೋಟಿ ರೂ. ವಿಶೇಷ ಅನುದಾನ ಮಂಜೂರಿ ಮಾಡಿಸಿದ್ದೇನೆ. ಆ ಹಣದಿಂದ ಪಟ್ಟಣ ವ್ಯಾಪ್ತಿಯ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ೪.೫೦ ಕೋಟಿ ರೂ. ಕಾಮಗಾರಿ ಈಗಾಗಲೇ ಮುಗಿದಿದ್ದು, ೩ ಕೋಟಿ ರೂ. ಕಾಮಗಾರಿ ಬಾಕಿ ಉಳಿದಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ಅವರು ಸೋಮವಾರ ಪಟ್ಟಣದ ಹಳೆ ಬಸ್ ನಿಲ್ದಾಣದಿಂದ ಹಳೆ ಮೀನು ಮಾರುಕಟ್ಟೆಗೆ ತೆರಳುವ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ, ಮಾತನಾಡಿದರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಬಿಜೆಪಿ ಸರ್ಕಾರ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದೆ ಎಂದ ಅವರು, ಹಳೆ ಮೀನು ಮಾರುಕಟ್ಟೆಗೆ ತೆರಳುವ ರಸ್ತೆಯು ಬಹಳ ವರ್ಷದಿಂದ ಹದಗೆಟ್ಟಿರುವುದನ್ನು ಈ ಭಾಗದ ಪುರಸಭಾ ಸದಸ್ಯೆ ಅನುರಾಧಾ ಬಾಳೇರಿ ನನ್ನ ಗಮನಕ್ಕೆ ತಂದರು. ಈ ಕಾರಣದಿಂದ ತ್ವರಿತವಾಗಿ ಕಾಮಗಾರಿ ಆರಂಭಿಸುವoತೆ ಗುತ್ತಿಗೆದಾರರಿಗೆ ಸೂಚಿಸಿ, ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹೊನ್ಮಾಂವ್ ಭಾಗದ ಅರ್ಧ ರಸ್ತೆ ಪುರಸಭಾ ವ್ಯಾಪ್ತಿಗೆ ಹಾಗೂ ಅರ್ಧ ಭಾಗ ಗ್ರಾ.ಪಂ ವ್ಯಾಪ್ತಿಗೆ ಬರುವುದರಿಂದ ಹಣ ಮಂಜೂರಿಗೆ ಸ್ವಲ್ಪ ವಿಳಂಭವಾಯಿತು. ಈ ಕುರಿತು ಸರ್ಕಾರದ ಕಾರ್ಯದರ್ಶಿಯವರ ಜೊತೆ ಚರ್ಚಿಸಿ, ಅನುದಾನ ಬಿಡುಗಡೆಗೊಳಿಸಲು ಪ್ರಯತ್ನ ನಡೆಸಿದ ಫಲವಾಗಿ ಅವರು ೧೨ ಲಕ್ಷ ರೂ.ಅನುದಾನ ನೀಡಿದ್ದಾರೆ. ಈ ಕಾಮಗಾರಿಗೆ ಒಂದು ವಾರದೊಳಗಡೆ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ನಂತರ ಕಾಮಗಾರಿ ಆರಂಭಿಸಲಾಗುತ್ತದೆ ಎಂದರು.

ಅಭಿವೃದ್ಧಿ ಎನ್ನುವುದು ನಿರಂತರವಾಗಿ ನಡೆಯಬೇಕು. ಈ ದೃಷ್ಟಿಯಿಂದ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಹಲವಾರು ಜನಪ್ರಿಯ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಕಾರ್ಯಗತಗೊಳಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಮತ್ತಷ್ಟುಹ ಹೊಸ ಹೊಸ ಯೋಜನೆಗಳನ್ನು ಸರ್ಕಾರದಿಂದ ಮಂಜೂರಿ ಮಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದರು.
error: