April 20, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಮಹಾಶಿವರಾತ್ರಿಯ ಸಂಭ್ರಮ…ಶಿವನಾಮ ಸ್ಮರಣೆ…ಧಾರ್ಮಿಕ ಪ್ರವಚನ ನೀಡಿದ ರಾಜಯೋಗಿನಿ ಉಮಕ್ಕ …

ಮೊಳಗಿದ ಜಯಘೋಷಗಳು… ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಹಾದಿಯಲ್ಲಿಯೇ ಸಾಗುವುದಾಗಿ ಪ್ರತಿಜ್ಞೆಯನ್ನು ಸ್ವೀಕರಿಸಿದ ಈಶ್ವರೀಯ ವಿಶ್ವವಿದ್ಯಾಲಯದ ಭಕ್ತಗಣ….

ಅಂಧಕಾರದ ಅಜ್ಞಾನವನ್ನು ತೊಲಗಿಸಿ ಭಕ್ತಿಯ ಜ್ಞಾನವನ್ನು ತುಂಬಿ ಲೋಕಕಲ್ಯಾಣ ಮಾಡಲು ಶಿವಪರಮಾತ್ಮನು ಭೂಮಿಗೆ ಬಂದು ಅವತರಿಸಿದ ದಿನವನ್ನೇ ಮಹಾಶಿವರಾತ್ರಿಯನ್ನು ಆಚರಿಸುತ್ತಿದ್ದೇವೆ…ಭಕ್ತಿ ಮತ್ತು ಜ್ಞಾನದ ಮಾರ್ಗದಿಂದ ಮಾತ್ರ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯಲು ಸಾಧ್ಯವಿದೆ ಆದ್ದರಿಂದ ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಾಧನೆ ಮಾಡಿ ಜೀವನದಲ್ಲಿ ಯಶಸ್ಸುಗಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ರಾಜಯೋಗಿನಿ ಉಮಕ್ಕ ಕರೆ ನೀಡಿದರು…ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಜನಸಾಮಾನ್ಯರಿಗೆ ಅರಿವಿನ ಜಾಗೃತಿ ಮೂಡಿಸಿ, ಧ್ಯಾನ, ಆಧ್ಯಾತ್ಮ ಹಾಗೂ ಭಕ್ತಿ ಮಾರ್ಗದಲ್ಲಿ ಮುನ್ನಡೆಯುವಂತೆ ಪ್ರೇರಕಶಕ್ತಿಯಂತೆ ಕೆಲಸ ಮಾಡುತ್ತಿದೆ ಎಂದು ಅಭಿಮಾನದಿಂದ ಹೇಳಿದರು…

ಪಟ್ಟಣದ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಶ್ರೀನಿವಾಸರಾವ್, ತಾಲ್ಲೂಕು ವಿತರಕರ ಸಂಘದ ಅಧ್ಯಕ್ಷ ಡಾ.ಕೆ.ಎಸ್.ರಾಜೇಶ್, ಸಾರಂಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಟಿ.ಜಾನಕಿ, ಪಟ್ಟಣದ ಜನಪ್ರಿಯ ವೈದ್ಯರಾದ ಡಾ.ದಿವಾಕರ್, ಶ್ರೀಮತಿ ಸುಧಾಮಣಿ, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ, ಉಧ್ಯಮಿ ಸಿಂದಘಟ್ಟಮೋಹನ್, ಪಿ.ಬಿ.ಮಂಜುನಾಥ್ ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

error: