December 22, 2024

Bhavana Tv

Its Your Channel

*ಬೀಳ್ಕೊಡುಗೆ ಸಮಾರಂಭ*

ಮುರ್ಡೇಶ್ವರ ;ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ದಿನಾಂಕ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿಯಾದ ಶ್ರೀಮತಿ ಮಮತಾ ನಾಯ್ಕರವರು ಕಾರ್ಯಕ್ರಮವನ್ನು ಅತ್ಯಂತ ಸುಂದರವಾಗಿ ಸಂಘಟಿಸಿದ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದರು.

ಸಂಸ್ಥೆಯಲ್ಲಿ ತಾವು ಪಡೆದ ಉತ್ತಮ ಶಿಕ್ಷಣದ ಕುರಿತು ತುಂಬು ಪ್ರೀತಿಯಿಂದ ಅನಿಸಿಕೆ ಹಂಚಿಕೊAಡು ತಮ್ಮ ಮುಂದಿನ ಗುರಿಯನ್ನೂ ವ್ಯಕ್ತಪಡಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಂಕಾಳ ಎಸ್. ವೈದ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿ, ವಿದ್ಯಾರ್ಥಿಗಳು ನಿರ್ಧರಿಸಿಕೊಂಡ ಮುಂದಿನ ಶೈಕ್ಷಣಿಕ ಸಾಧನೆಗೆ ತನ್ನಿಂದಾಗುವ ಎಲ್ಲ ಸಹಾಯ, ಸಹಕಾರ ನೀಡುವ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪುಷ್ಪಲತಾ ಎಂ. ವೈದ್ಯ ಮಕ್ಕಳಿಗೆ ಹಿತನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ಜಗನ್ನಾಥ್ ಚಿನೇಕರ್, ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಮನರಂಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

error: