October 5, 2024

Bhavana Tv

Its Your Channel

“ಚಿಕ್ಕೋಡಿ ಜಿಲ್ಲಾ ಬಿಜೆಪಿಗೆ ನೂತನ ಸಾರಥಿ “

ಚಿಕ್ಕೋಡಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಜಿ, ಯವರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ, ಜಿ ಯವರು ಭಾಗವಹಿಸಿ, ನೂತನ ಜಿಲ್ಲಾಧ್ಯಕ್ಷರಾದ ಡಾ. ರಾಜೇಶ್‌ ನೇರ್ಲಿ ಜಿ ಅವರಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಪದಗ್ರಹಣ ಮಾಡಿದರು. ಹಾಗೂ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಬಿಜೆಪಿ ಪಕ್ಷದಲ್ಲಿ ಅನ್ಯೋನ್ಯತೆಯ ಪರಿವಾರವನ್ನು ಕಾಣುತ್ತೇವೆ, ಹಿರಿಯರ ತ್ಯಾಗ, ಬಲಿದಾನಗಳಿಂದ ಇಂದು ದೇಶದಲ್ಲಿ ಓರ್ವ ಸಾಮಾನ್ಯ , ನಿಷ್ಠಾವಂತ ಕಾರ್ಯಕರ್ತ ಕೂಡ ಪಕ್ಷದಲ್ಲಿ ಉನ್ನತ ಸ್ಥಾನ ಗಳಿಸ ಬಹುದು ಎಂದು ಪದೇ ಪದೇ ಸಾಬೀತಾಗಿದೆ. ಮುಂದಿನ ದಿನಗಳಲ್ಲಿ ಚಿಕ್ಕೋಡಿ ಜಿಲ್ಲೆಯಲ್ಲಿ ಬಲಿಷ್ಠ ಬಿಜೆಪಿ ಕಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಜೊತೆಯಾಗಿ ಶ್ರಮಿಸೋಣ. ಜಿಲ್ಲಾಧ್ಯಕ್ಷರಿಗೆ ಎಲ್ಲ ರೀತಿಯ ಸಹಕಾರ ನೀಡೋಣ. ಜೊತೆಯಾಗಿ, ಸದೃಢವಾಗಿ ಪಕ್ಷ ಕಟ್ಟೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಶ್ರೀ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಜಿಲ್ಲಾ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಶಶಿಕಾಂತ ನಾಯಿಕ, ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಶ್ರೀ ಪಿ. ರಾಜೀವ, ಶ್ರೀ ಮಹೇಶ ಕುಮಟಳ್ಳಿ, ಮಾಜಿ ಶಾಸಕರಾದ ಶ್ರೀ ಬಾಳಾಸಾಹೇಬ ವಡ್ಡರ, ಶ್ರೀ ಮನೋಹರ ಕಟ್ಟಿಮನಿ, ಶ್ರೀ ಮಹೇಶ ತೆಂಗಿನಕಾಯಿ, ಮಾಜಿ ಬೆಳಗಾವಿ ಜಿಲ್ಲಾ ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಈರಣ್ಣ ಕಡಾಡಿ, ಶ್ರೀ ಮಾರುತಿ ಅಷ್ಟಗಿ, ಅನೇಕ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

error: