May 18, 2024

Bhavana Tv

Its Your Channel

ಭಟ್ಕಳ ಪುರಸಭೆಗೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಭೇಟಿ ; ಸದಸ್ಯರು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ

ಭಟ್ಕಳ; ತಾಲೂಕಿನ ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬoಧಿಸಿದoತೆ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಭೇಟಿ ನೀಡಿ ಸದಸ್ಯರು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಕಳೆದ ೯ ದಿನಗಳಿಂದ ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಪೂರೈಕೆ ಕಡಿತಗೊಂಡಿದೆ. ಅಲ್ಲದೇ ನೂತನ ಹೆದ್ದಾರಿ ಕಾಮಗಾರಿಯಿಂದಾಗಿ ಭಟ್ಕಳ ಪಟ್ಟಣ ಪ್ರದೇಶದಲ್ಲಿ ಸಂಪರ್ಕ ರಸ್ತೆ ಇಲ್ಲವಾಗುತ್ತಿದ್ದು, ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಜಾಲಿ ಪಟ್ಟಣ ಪಂಚಾಯತ ಸದಸ್ಯರು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ.ಹರೀಶಕುಮಾರ, ಕುಡಿಯುವ ನೀರಿನ ಪೂರೈಕೆ ಕಡಿತದ ಕುರಿತಂತೆ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ದೊರಕಿಸಿ ಕೊಡಲಾಗುವುದು. ಮಳೆಗಾಲಕ್ಕೂ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಜನ ಸಾಮಾನ್ಯರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಚರ್ಚಿಸಿ ಪರಿಹಾರ ರೂಪಿಸಲಾಗುವುದು ಎಂದು ತಿಳಿಸಿದರು.

ಜಾಲಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸದಸ್ಯರ ಗಮನಕ್ಕೆ ಬಾರದೇ ಒಳಚರಂಡಿ ಕಾಮಗಾರಿಯನ್ನು ಆರಂಭಿಸಲಾಗಿದೆ. ಜಾಲಿ ವ್ಯಾಪ್ತಿಯಲ್ಲಿಯೇ ೫ ವೆಟ್‌ವೆಲ್‌ಗಳನ್ನು ತೆರೆಯಲಾಗುತ್ತಿದೆ. ಈ ಭಾಗದಲ್ಲಿ ನೀರಿನ ಹರಿವು ಸಮರ್ಪಕವಾಗಿ ಇಲ್ಲ. ಆದ್ದರಿಂದ ಸುತ್ತಮುತ್ತಲಿನ ಜನರು ಆತಂಕ ಎದುರಿಸುತ್ತಿದ್ದಾರೆ, ಕಾಮಗಾರಿಯ ಪರಿಶೀಲನಾ ಕಾರ್ಯವೂ ಅಧಿಕಾರಿಗಳಿಂದ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಸದಸ್ಯರು ಅಸಮಾಧಾನವನ್ನು ಹೊರ ಹಾಕಿದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಗಳು, ಅತ್ಯಂತ ವೈಜ್ಞಾನಿಕ ರೀತಿಯಲ್ಲಿಯೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅಭಿಯಂತರುಗಳಿಗೆ ಸೂಚಿಸಲಾಗುವುದು ಎಂದರು. ಸ್ಥಳೀಯವಾಗಿ ವಿಜಯಾ ಬ್ಯಾಂಕ್ ಹಾಗೂ ಅಂಚೆಕಛೇರಿಯಲ್ಲಿ ಆಧಾರ್ ಕಾರ್ಡ ಪಡೆಯಲು ವ್ಯವಸ್ಥೆ ರೂಪಿಸಲಾಗಿದ್ದು, ಕೆಲಸ ವಿಳಂಬವಾಗುತ್ತಿದೆ. ಹೆಚ್ಚಿನ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಳ್ಳಲಾಯಿತು. ಜಾಲಿ ಪಟ್ಟಣ ಪಂಚಾಯತ ಕಚೇರಿಯ ನೂತನ ಕಟ್ಟಡ ನಿರ್ಮಾಣ, ಭಟ್ಕಳ ಪುರಸಭಾ ವ್ಯಾಪ್ತಿಯ ಮೀನುಮಾರುಕಟ್ಟೆ ಸ್ಥಳಾಂತರಕ್ಕೆ ಸಂಬAಧಿಸಿದAತೆ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಪರಿಹಾರ ಒದಗಿಸಿಕೊಡಲು ಪ್ರಯತ್ನಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಭಟ್ಕಳ ಸಹಾಯಕ ಆಯುಕ್ತ ಭರತ್, ತಹಸೀಲ್ದಾರ ಎಸ್. ರವಿಚಂದ್ರ, ಭಟ್ಕಳ ಪುರಸಭಾ ಸಭೆಯಲ್ಲಿ ಅಧ್ಯಕ್ಷ ಫರ್ವೇಜ್ ಕಾಶೀಂಜಿ, ಉಪಾಧ್ಯಕ್ಷ ಕೈಸರ್ ಮೋತೆಶಮ್, ಮುಖ್ಯಾಧಿಕಾರಿ ದೇವರಾಜು, ವೇಣುಗೋಪಾಲ ಶಾಸ್ತ್ರೀ, ಜಾಲಿ ಪಟ್ಟಣ ಪಂಚಾಯತ ಸಭೆಯಲ್ಲಿ ಅಧ್ಯಕ್ಷೆ ಶಮೀಮ್ ಬಾನು, ಮುಖ್ಯಾಧಿಕಾರಿ ಅಜಯ್ ಮೊದಲಾದವರು ಉಪಸ್ಥಿತರಿದ್ದರು

error: