October 5, 2024

Bhavana Tv

Its Your Channel

ಸೆಕೆಂಡರಿ ಹೈಸ್ಕೂಲ್ ವಿದ್ಯಾರ್ಥಿ ಸನಿದ ನಾಯಕ ರಾಜ್ಯಮಟ್ಟಕ್ಕೆ

ಕುಮಟಾ ಮುರೂರು ಪ್ರಗತಿ ವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಇನ್‌ಸ್ಪೆöÊರ್ ಅವಾರ್ಡ್ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಕುಮಟಾದ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿಯ ೯ ನೇ ತರಗತಿಯ ವಿದ್ಯಾರ್ಥಿ ಸನಿದ ನಾಯಕ ಪ್ರದರ್ಶಿಸಿದ “ಪರಿಸರ ಸ್ನೇಹಿ ಒಲೆ” ಆಯ್ಕೆಯಾಗಿದ್ದು, ಮಂಡ್ಯ ಡಯಟ್‌ನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರದರ್ಶನಗೊಳ್ಳಲಿದೆ.
ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ನೀಡಿದ ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಇವರಿಗೆ ಮಹಾತ್ಮಾಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯಾಧ್ಯಾಪಕರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷರಾದ ಸಣ್ಣಪ್ಪ ಮಾರುತಿ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಊರನಾಗರಿಕರು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭ ಕೋರಿದ್ದಾರೆ.

error: