June 15, 2024

Bhavana Tv

Its Your Channel

ಶ್ರೀ ರೇಣುಕಾ ಎಲ್ಲಮ್ಮದೇವಿ ೧೩ನೇ ವರ್ಷದ ವಾರ್ಷಿಕ ವಿಶೇಷ ಪೂಜಾ ಮಹೋತ್ಸವ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭವು

ಕೃಷ್ಣರಾಜಪೇಟೆ ;

ಪುರಸಭೆಯ ಮಾಜಿ ಅಧ್ಯಕ್ಷ ಹೆಚ್.ಕೆ.ಅಶೋಕ್ ಮತ್ತು ಪುರಸಭೆ ಸದಸ್ಯ ಹೆಚ್.ಆರ್.ಲೋಕೇಶ್ ಕಾರ್ಯಕ್ರಮದಲ್ಲಿ ಮಾತನಾಡಿ ಆರ್ಯ ಈಡಿಗ ಸಮಾಜದ ಬಂಧುಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ನಿಮ್ಮಮಕ್ಕಳನ್ನೇ ಸಮಾಜಕ್ಕೆ ಆಸ್ತಿಯನ್ನಾಗಿ ಕೊಡುಗೆ ನೀಡಬೇಕು… ಇಂದಿನ ಮಕ್ಕಳೇ ನಾಳಿನ ಭವ್ಯಭಾರತದ ಸತ್ಪ್ರಜೆಗಳಾದ್ದರಿಂದ ಮಕ್ಕಳಲ್ಲಿ ಸದ್ಗುಣಗಳನ್ನು ತುಂಬಿ ಸಮಗ್ರವಾಗಿ ಸಜ್ಜುಗೊಳಿಸಬೇಕು ಎಂದು ಮನವಿ ಮಾಡಿದರು…ಕೆ.ಆರ್.ಪೇಟೆ ಪುರಸಭೆಯ ವ್ಯಾಪ್ತಿಯಲ್ಲಿ ಆರ್ಯ ಈಡಿಗ ಸಮಾಜದ ಸಭಾಭವನವನ್ನು ನಿರ್ಮಿಸಲು ಪುರಸಭೆಯ ವತಿಯಿಂದ ಅಗತ್ಯ ನಿವೇಶನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಘೋಷಿಸಿದರು…

ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನ ಟ್ರಸ್ಟಿನ ಅಧ್ಯಕ್ಷ ಡಾ.ವೆಂಕಟಾಚಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು….

ಪುರಸಭೆಗೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾಗಿರುವ ಹೆಚ್.ಡಿ.ಅಶೋಕ್, ಹೆಚ್.ಆರ್.ಲೋಕೇಶ್, ಎನ್.ಪ್ರವೀಣ್, ಕಲ್ಪನಾ ದೇವರಾಜು, ವ್ಯವಸಾಯ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಹೆಚ್.ಕೆ.ಅಶೋಕ್, ಹೊಸಹೊಳಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಗೋಪಾಲ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಕೆ.ಆರ್.ನೀಲಕಂಠ, ತಾಲ್ಲೂಕು ಪಂಚಾಯಿತಿ ಮಾಜಿಸದಸ್ಯ ರಾಮಸ್ವಾಮಿ, ಸಮಾಜಸೇವಕ ಚಿನಕುರಳಿ ನಾಗರಾಜು, ಅಕ್ಕಿಹೆಬ್ಬಾಳು ಗ್ರಾಪಂ ಮಾಜಿಅಧ್ಯಕ್ಷ ಟಿ.ಅಣ್ಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು…

ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿಯ ಅನಂತು, ಮಂಜುನಾಥ್, ತಾಲ್ಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ದೇವರಾಜು, ಮುಖಂಡರಾದ ಪ್ರಕಾಶ್, ನಂಜುAಡ, ಚಂದ್ರೇಗೌಡ, ರವಿಕುಮಾರ್, ಅರ್ಚಕರಾದ ಕೇಶವಮೂರ್ತಿ ಮತ್ತು ಸುರೇಶ್ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…೧೩ನೇ ವರ್ಷದ ಪೂಜಾ ಮಹೋತ್ಸವದ ಅಂಗವಾಗಿ ೫ಸಾವಿರಕ್ಕೂ ಹೆಚ್ಚಿನ ಭಕ್ತರಿಗೆ ಅನ್ನದಾಸೋಹವನ್ನು ಕಲ್ಪಿಸಿಕೊಡಲಾಗಿತ್ತು…

error: