December 20, 2024

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣ-ಸಾಮಾಜಿಕ ನ್ಯಾಯ ದಿನ ಹಾಗೂ ಮೂಲಭೂತ ಹಕ್ಕುಗಳನ್ನು ಕುರಿತು ಜಾಗೃತಿ ಕಾರ್ಯಕ್ರಮ

ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ನ್ಯಾಯ ದಿನ ಹಾಗೂ ಮೂಲಭೂತ ಹಕ್ಕುಗಳನ್ನು ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ….

ಕೆ.ಆರ್.ಪೇಟೆ ಪಟ್ಟಣದ ಸಿವಿಲ್ ನ್ಯಾಯಾಲಯದ ಕಿರಿಯಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಫಾರೂಕ್ ಝಾರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ….

ಸಂವಿಧಾನದ ಆಶಯಗಳು ಈಡೇರಬೇಕಾದರೆ ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬರೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಂತೆ ಸಾಮಾಜಿಕ ನ್ಯಾಯ ದೊರೆಯಬೇಕು… ಸಾಮಾಜಿಕ ನ್ಯಾಯ ಹಾಗೂ ಮೂಲಭೂತ ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ ಆದ್ದರಿಂದ ನಾವುಗಳು ಸಂವಿಧಾನದ ಆಶಯಗಳ ಈಡೇರಿಕೆಗೆ ಬದ್ಧತೆಯಿಂದ ಕೆಲಸ ಮಾಡಬೇಕು. ಸಾಮಾಜಿಕ ಅಸಮಾನತೆಗಳು ಹಾಗೂ ಸಾಮಾಜಿಕ ಕಟ್ಟುಪಾಡುಗಳ ನಿರ್ಮೂಲನೆಗೆ ಹೋರಾಟ ಮಾಡಬೇಕು…ಯುವಜನರು ಶಿಸ್ತುಬದ್ಧವಾದ ಜೀವನವನ್ನು ನಡೆಸಬೇಕು. ಸತತವಾದ ಅಧ್ಯಯನ ಹಾಗೂ ಸಾಧಿಸುವ ಛಲವನ್ನು ಜೀವನದಲ್ಲಿ ಮೈಗೂಡಿಸಿಕೊಂಡು ಸರ್ವಶ್ರೇಷ್ಠ ಸಾಧನೆ ಮಾಡಲು ಪಣತೊಡಬೇಕು ಎಂದು ನ್ಯಾಯಾಧೀಶರಾದ ಫಾರೂಕ್ ಝಾರೆ ಕರೆ ನೀಡಿದರು….

ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು…

ಕಾರ್ಯಕ್ರಮದಲ್ಲಿ ಸರ್ಕಾರಿ ಅಭಿಯೋಜಕ ಬಿ.ಸಿ.ರಾಜೇಶ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಎಂ.ಆರ್.ಪ್ರಸನ್ನಕುಮಾರ್, ಪದಾಧಿಕಾರಿಗಳಾದ ಕೆ.ಆರ್.ಇಂದ್ರಕುಮಾರ್, ಬಿ.ಕೆ.ಯೋಗೇಶ್, ಡಿ.ಆರ್.ಮೋಹನ್, ಅನ್ವೇಶ್, ತಾಲ್ಲೂಕು ಬಿಸಿಎಂ ಅಧಿಕಾರಿ ವೆಂಕಟೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…..

error: