ಕೃಷ್ಣರಾಜಪೇಟೆ ತಾಲ್ಲೂಕಿನ ಹೇಮಗಿರಿಯ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಕ್ಷೇತ್ರದಲ್ಲಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಪದವಿಪೂರ್ವ ಕಾಲೇಜು ಹಾಗೂ ಚಿನಕುರಳಿಯ ಬಿಜಿಎಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಯಲ್ಲಿ ಶುಭವಾಗಲೆಂದು ಶ್ರೀ ರಂಗನಾಥಸ್ವಾಮಿಯ ಪದತಳದಲ್ಲಿ ಪರೀಕ್ಷಾ ಪ್ರವೇಶಪತ್ರವನ್ನಿಟ್ಟು ವಿದ್ಯಾರ್ಥಿಗಳ ಸಮಕ್ಷಮದಲ್ಲಿ ಹೇಮಗಿರಿ ಶಾಖಾಮಠದ ವ್ಯವಸ್ಥಾಪಕರಾದ ಡಾ.ಜೆ.ಎನ್.ರಾಮಕೃಷ್ಣೇಗೌಡ ವಿಶೇಷಪೂಜೆ ಸಲ್ಲಿಸಿ ಪ್ರಾರ್ಥಿಸಿದರು …
ಮುಂಬರುವ ದ್ವಿತೀಯ ಪಿಯುಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ನಿರ್ಣಾಯಕ ಘಟ್ಟವಾದ್ದರಿಂದ ಪರೀಕ್ಷೆಯಲ್ಲಿ ಶುಭವಾಗಲಿ ಎಂದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು…
ತಾಯಿ ವಿದ್ಯಾಸರಸ್ವತಿ ಹಾಗೂ ವಿದ್ಯಾಗಣಪತಿಯು ಶುಭ ಕರುಣಿಸಲೆಂದು ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದು ಡಾ.ಜೆ.ಎನ್.ರಾಮಕೃಷ್ಣೇಗೌಡ ತಿಳಿಸಿದರು…
ಹೇಮಗಿರಿ ಬಿಜಿಎಸ್ ಸ್ಕೂಲ್ ಪ್ರಾಂಶುಪಾಲೆ ಪವಿತ್ರ, ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಪ್ರಸಾದೇಗೌಡ, ಪ್ರಸನ್ನ, ಚಿದಂಬರ್ ಮತ್ತು ಭಾಗ್ಯಮ್ಮ ಸೇರಿದಂತೆ ಐನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು…..
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.