March 29, 2024

Bhavana Tv

Its Your Channel

ನಾಳೆಯಿಂದ ‘ದಕ್ಷಿಣ ಕನ್ನಡ’ದಲ್ಲಿ ಎಲ್ಲಾ ಅಂಗಡಿ ಓಪನ್ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ(23-6-2021) ಬೆಳಗ್ಗೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಾಕ್ ಡೌನ್ ನಿಂದ ಕೆಲವು ಸಮಸ್ಯೆಗಳಾಗಿದ್ದವು. ಜವುಳಿ ವ್ಯಾಪರಸ್ಥರು ಸೇರಿದಂತೆ ಹಲವು ಅಂಗಡಿಗಳ ಮಾಲಕರು ಬದುಕಿ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ ಎಂದು ದೂರು ನೀಡುತ್ತಿದ್ದರು. ಎಲ್ಲಾ ಶಾಸಕರು ಲಾಕ್ ಡೌನ್ ಸಡಿಲ ಮಾಡಬೇಕೆಂದು ಆಗ್ರಹ ಮಾಡುತ್ತಿದ್ದರು. ಇದಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಚರ್ಚಿಸಿ ಜನಜೀವನಕ್ಕೆ ತೊಂದರಯಾಗದಂತೆ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 2 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಾಧ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯೋದಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಯಾರೂ ಕೋವಿಡ್ ನಿಯಮ ಉಲ್ಲಂಘನೆ ಮಾಡಬಾರದು. ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವ ಮೂಲಕ, ಅಗತ್ಯ ವಸ್ತು ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ.

source: ಉದಯವಾಣಿ

error: