April 27, 2024

Bhavana Tv

Its Your Channel

ಮೂಡಬಿದ್ರೆ: ಪತಿಯಿಂದ ಪತ್ನಿಯ ಮಾರಕಾಸ್ತ್ರದಿಂದ ಕಡಿದು ಕೊಲೆ

ಮೂಡಬಿದ್ರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮಾರಕಾಸ್ತ್ರದಿಂದ ಕಡಿದು ಕೊಲೆಗೈದ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಧರೆಗುಡ್ಡೆ ಎಂಬಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಮಧ್ಯರಾತ್ರಿಯ ಸುಮಾರಿಗೆ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಇಂದು ನಸುಕಿನ ಜಾವ ಮೃತಪಟ್ಟಿದ್ದಾರೆ. ಮೃತರನ್ನು ಸುನೀತಾ(೨೮) ಎಂದು ಹೆಸರಿಸಲಾಗಿದೆ. ದಿನ್ ರಾಜ್ ಪ್ರಕರಣದಲ್ಲಿ ಆರೋಪಿಯಾಗಿದ್ದು ನಿನ್ನೆ ಮನೆಯಲ್ಲಿ ಪತ್ನಿ ಸುನೀತಾ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ತಲೆಯ ಭಾಗಕ್ಕೆ ತಗುಲಿದ ಏಟಿನಿಂದ ಸುನೀತಾ ಸಾವನ್ನಪ್ಪಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ

error: