April 25, 2024

Bhavana Tv

Its Your Channel

ಇಂದಿನಿಂದ ಧರ್ಮಸ್ಥಳ ಲಕ್ಷದೀಪೋತ್ಸವ: ವಿದ್ಯುತ್ ದೀಪಾಲಂಕೃತಗೊಂಡು ಕಣ್ಮನ ಸೆಳೆಯುತ್ತಿರುವ ದೇವಸ್ಥಾನ

ಧರ್ಮಸ್ಥಳ: ಇತಿಹಾಸ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಗಳು ನ. 29 ರಿಂದ ಡಿ.4ರ ವರೆಗೆ ನಡೆಯಲಿವೆ. ಲಕ್ಷದೀಪೋತ್ಸವಕ್ಕೆ ಸಿದ್ಧಗೊಂಡಿರುವ ಧರ್ಮಸ್ಥಳ ದೇವಸ್ಥಾನ ವಿವಿಧ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕಾರಗೊಡು ಕಣ್ಮನ ಸೆಳೆಯುತ್ತಿದೆ. ಡಿ. 3 ರಂದು ಲಕ್ಷ ದೀಪೋತ್ಸವ ನಡೆಯಲಿದೆ.

ಡಿ. 2 ರಂದು ಗುರುವಾರ ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾ ಭವನದಲ್ಲಿ ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸುವರು. ಡಿ. 3 ರಂದು ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉದ್ಘಾಟಿಸುವರು.

error: