June 20, 2024

Bhavana Tv

Its Your Channel

ತೊಕ್ಕೊಟ್ಟು: ನೇತ್ರಾವತಿ ಸೇತುವೆಯಲ್ಲಿ ಅನಾಥವಾಗಿ ಕಾರು ಪತ್ತೆ; ಮಾಲಕ ನಾಪತ್ತೆ

ಮಂಗಳೂರು, ಎ.16: ಕಾರೊಂದು ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಮಾಲಕ ನಾಪತ್ತೆಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆ ಬಳಿ ಕಳೆದ ರಾತ್ರಿ ನಡೆದಿದೆ.

ನಾಪತ್ತೆಯಾದವರನ್ನು ಕಾರು ಮಾಲಕ ಸೋಮೇಶ್ವರ ಕೊಲ್ಯ ನಿವಾಸಿ ವಿಕ್ರಂ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಕಾರು ರಾತ್ರಿ 10:30ಕ್ಕೆ ತೊಕ್ಕೊಟ್ಟು ಕಡೆಯಿಂದ ಸೇತುವೆ ಪ್ರವೇಶಿಸುವಲ್ಲಿ ಪತ್ತೆಯಾಗಿದೆ. ಕಾರಿನ ಹೆಡ್ ಲೈಟ್ ಉರಿಯುತ್ತಿದ್ದು, ಬಾಗಿಲು ತೆರೆದ ಸ್ಥಿತಿಯಲ್ಲಿತ್ತೆನ್ನಲಾಗಿದೆ. ಈ ನಡುವೆ ವಿಕ್ರಂ ಶೆಟ್ಟಿ ನಾಪತ್ತೆಯಾಗಿದ್ದು, ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಂಕನಾಡಿ ನಗರ ಠಾಣೆ ಪೊಲೀಸರು ಆಗಮಿಸಿದ್ದು, ಶೋಧ ಮುಂದುವರಿಸಿದ್ದಾರೆ.

source ; dailyhunt

error: