March 30, 2025

Bhavana Tv

Its Your Channel

ಶ್ರೀ ಶ್ರೀ ಶ್ರೀ ಬ್ರಹಾನಂದ ಸರಸ್ವತಿ ಸ್ವಾಮೀಜಿಯವರ ಪಾದುಕಾ ಪೂಜೆ ನೇರವೇರಿಸಿದ ಮಾಜಿ ಶಾಸಕ ಮಧು ಬಂಗಾರಪ್ಪ

ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಕಾರ್ಯಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ, ಮಾಜಿ ಶಾಸಕ ಮಧು ಬಂಗಾರಪ್ಪ ನವರು ಜು೨೨ ರಂದು ಭಾಗವಹಿಸಿ ಚಾತುರ್ಮಾಸ್ಯ ಪವಿತ್ರ ಪರ್ವ ಕಾಲದಲ್ಲಿ ಗುರು ಪಾದುಕಾ ಪೂಜೆ ನೇರವೇರಿಸಿ ಗುರುಗಳಿಂದ ಆರ್ಶಿವಾದ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಕ್ಷೇತ್ರದ ಶಾಸಕರು ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೊಡಿ, ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್,ತಾಲೂಕು ಮಹಿಳಾ ಸಮಿತಿ ಅಧ್ಯಕ್ಷೆ ಉಷಾ ಶರತ್, ಅಂಡಿAಜೆ ಗ್ರಾಮ ಪಂಚಾಯತ್ ಸದಸ್ಯೆ ವಂದನಾ, ಯಶೋಧರ ಚಾರ್ಮಾಡಿ,ಹರೀಶ್ ಸುವರ್ಣ ಕನ್ಯಾಡಿ,ಕಾಂಗ್ರೇಸ್ ಮುಖಂಡರಾದ ಜೇಸಿಂತ ಮೋನಿಸ್, ಸೌಮ್ಯ ಲಾಯಿಲ, ಚಾತುರ್ಮಾಸ್ಯ ಸಮಿತಿ ಕಾರ್ಯದರ್ಶಿ ಗಣೇಶ್ ನಾವೂರ್, ಸಂಚಾಲಕ ಪ್ರಶಾಂತ್ ಪಾರೆಂಕಿ, ಸೇವಾ ಸಮಿತಿ ಕಾರ್ಯದರ್ಶಿ ಚಿದಾನಂದ ಇಡ್ಯಾ, ಸಮತಿ ಸದಸ್ಯರಾದ ರಾಜೇಶ್ ಮೂಡುಕೋಡಿ, ಇನ್ನಿತರರು ಉಪಸ್ಥಿತರಿದ್ದರು.

error: