December 21, 2024

Bhavana Tv

Its Your Channel

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಭಕ್ತರಿಗೆ ಸಿಹಿಸುದ್ದಿ : ಜೂನ್ 1 ರಿಂದ ದರ್ಶನಕ್ಕೆ ಅವಕಾಶ

ಬೆಳ್ತಂಗಡಿ : ರಾಜ್ಯ ಸರ್ಕಾರವು ಜೂನ್ 1 ರಿಂದ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದ್ದು, ಜೂನ್ 1 ರಿಂದ ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ವಿ.ಶೆಟ್ಟಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಲಾಕ್ ಡೌನ್ ನಿಂದ ಧಾರ್ಮಿಕ ಕೇಂದ್ರಗಳಿಗೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಅದರಂತೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಯೂ ಪ್ರವೇಶವನ್ನು ಬಂದ್ ಮಾಡಲಾಗಿತ್ತು.ಇದೀಗ ಮುಜರಾಯಿ ಇಲಾಖೆಯು ಜೂನ್ 1 ರಿಂದ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಿದ್ದು, ಧರ್ಮಸ್ಥಳದ ಶ್ರೀಮಂಜುನಾಥನ ಸ್ವಾಮೀಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಕಡ್ಡಾಯ ಒಳಗೊಂಡಂತೆ ಭಕ್ತರ ಸಂಖ್ಯೆಯಲ್ಲಿ ನಿಯಂತ್ರಣ ಕಾಪಾಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಪೂರ್ವ ತಯಾರಿ ನಡೆಸಲಾಗುತ್ತಿದ್ದು, ವಸತಿ ಬಗ್ಗೆ ಯಾವುದೆ ತೀರ್ಮಾನ ಕೈಗೊಂಡಿಲ್ಲ ಎಂದು ವೀರು ವಿ.ಶೆಟ್ಟಿ ಮಾಹಿತಿ ನೀಡಿದ್ದಾರೆ

error: