
ದಕ್ಷಿಣ ಕನ್ನಡ : ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮಟ್ಟತ್ತಿಲ್ ಮನೆಯ ಕೆ ಅನುಪ್ ಎಂಬುವರ ಪತ್ನಿ ಸೌಮ್ಯ (34) ಎಂಬವರು ನಾಪತ್ತೆಯಾದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ
ದಾಖಲಾಗಿದೆ.
ಅನೂಪ್ ಎಂಬವರ ಪತ್ನಿ ಶ್ರೀಮತಿ ಸೌಮ್ಯ ಎಂಬವರು ಐತೂರು ಗ್ರಾಮ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದರು. ಕೋರೋನಾ ವಾರಿಯರ್ ಆಗಿ ಕೂಡಾ ಇವರು ಕೆಲಸ ಮಾಡಿಕೊಂಡಿದ್ದರು.ದಿನಾಂಕ 08.06.2020 ಬೆಳ್ಳಿಗ್ಗೆ 10.30 ಗಂಟೆಗೆ ಐತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗರ್ಭಿಣಿ ಮಹಿಳೆಯೋರ್ವರನ್ನು ಡೆಲಿವರಿಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೊರಟ ಇವರು ನಂತರದಲ್ಲಿ ಕಾಣೆಯಾಗಿದ್ದಾರೆ.
ಆಟೋ ರಿಕ್ಷಾವನ್ನು ಬಾಡಿಗೆ ಮಾಡಿ ಕಡಬ ಸರಕಾರಿ ಆಸ್ಪತ್ರೆಗೆ ಬಂದಿದ್ದಾಗಿ ಮಾಹಿತಿ ಲಭಿಸಿದೆ. ಆಟೋರಿಕ್ಷಾ ಚಾಲಕನು ಕಡಬ ಸರ್ಕಾರಿ ಆಸ್ಪತ್ರೆಯವರೆಗೆ ಹೋಗಿ ಸೌಮ್ಯ ರನ್ನು ಬಿಟ್ಟು ಬಂದಿದ್ದರು.ನಂತರ ಸಂಜೆಯಾದರೂ ಹೆಂಡತಿ ಮನೆಗೆ ಬಾರದೇ ಇದ್ದುದರಿಂದ ಅನೂಪ್ ಅವರು ಸಂಬಂಧಿಕರ ಮತ್ತು ಪರಿಚಯಸ್ಥರ ಹಾಗೂ ಸುತ್ತಮುತ್ತ ಪರಿಸರ ವ್ಯಾಪ್ತಿಯಲ್ಲಿ ಹುಡುಕಾಟ ನಡೆಸಿದರೂ ಸೌಮ್ಯ ರವರು ಪತ್ತೆಯಾಗಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಸೌಮ್ಯ ರವರ ಪತಿ ಅನೂಪ್ ಕಡಬ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇನ್ನು ಈ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ