May 5, 2024

Bhavana Tv

Its Your Channel

ಪೈಲೆಟ್ ತರಬೇತಿ ಪಡೆದಿದ್ದ ಯುವಕ : ನೇಣು ಬಿಗಿದುಕೊಂಡು ಆತ್ಮಹತ್ಯೆ…

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಪೈಲೆಟ್ ತರಬೇತಿ ಪಡೆದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ ಎನ್ನಲಾಗಿದೆ.
ಮರೋಳಿ ನಿವಾಸಿ ಅದ್ವೈತ್ ಶೆಟ್ಟಿ(32) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಅದ್ವೈತ್ ಪೈಲೆಟ್‌ ತರಬೇತಿ ಮುಗಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

error: