
ಮಂಗಳೂರು: ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆ ನಿವಾಸಿ ವೃದ್ಧೆಯ ಕೊರೋನ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದ್ದು ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 20ಕ್ಕೇರಿದೆ.
ವೃದ್ಧೆ ವಾರದ ಹಿಂದೆ ಅಸೌಖ್ಯಕ್ಕೊಳಗಾಗಿ ಸುಳ್ಯದ ಸರಕಾರಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ದಾಖಲಾಗಿದ್ದರು. ಆಸ್ಪತ್ರೆಯ ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ ನಡೆಸಿದಾಗ ಒಬ್ಬ ನರ್ಸ್ ಗೆ ಸೋಂಕು ದೃಢಪಟ್ಟಿತ್ತು. ಅದೇ ನರ್ಸ್ ಐಸಿಯುನಲ್ಲಿ ದಾಖಲಾಗಿದ್ದ ವೃದ್ಧೆಗೂ ಚಿಕಿತ್ಸೆ ನೀಡುತ್ತಿದ್ದರೆನ್ನಲಾಗಿದೆ. ಕೊರೋನ ಪರೀಕ್ಷೆಗೆ ಗಂಟಲ ದ್ರವ ತೆಗೆಯಲಾಗಿದ್ದು ವರದಿ ಬರುವ ಮೊದಲೇ ವೃದ್ಧೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ