
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸುತ್ತ ಮುತ್ತ ನಿರಂತರ ಬೈಕ್ ಕಳವು ನಡೆಯುತ್ತಿದ್ದವು.ಈ ಬಗ್ಗೆ ಕರ‍್ಯಾಚರಣೆ ಗಿಳಿದ ಬೆಳ್ತಂಗಡಿ ಸಬ್ ಇನ್ಸ್ ಪೆಕ್ಟರ್ ನಂದ ಕುಮಾರ್ ಎಂ.ಎಂ ಮತ್ತು ಸಿಬ್ಬಂದಿಯವರು ಬೆಳ್ತಂಗಡಿ ಗುರುವಾಯನಕೆರೆ ಹೆದ್ದಾರಿಯ ಜೈನ್ ಪೇಟೆ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು.ಆಗ ಎರಡು ಬೈಕಲ್ಲಿ ಬಂದ ಮೂವರನ್ನು ತಡೆದು ನಿಲ್ಲಿಸಿ ಪರಿಶೀಲಿಸಿ ವಿಚಾರಣೆಗೊಳಪಡಿಸಿದಾಗ ಇತ್ತೀಚೆಗೆ ಬೆಳ್ತಂಗಡಿ ಎಸ್ ಡಿ ಎಂ ಕಲಾ ಭವನದ ಮುಂಭಾಗದ ಮನೆಯಿಂದ ಮತ್ತು ಮೂಡಬಿದಿರೆ ಠಾಣಾ ವ್ಯಾಪ್ತಿಯಿಂದ ಕಳವು ಮಾಡಿರುವ ಬೈಕ್ ಎಂದು ಗೊತ್ತಾಗಿದೆ.
ಈ ಕರ‍್ಯಾಚರಣೆಯು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ವಿಕ್ರಂ ಆಮ್ಟೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಇವರ ನರ‍್ದೇಶನದಂತೆ ಬಂಟ್ವಾಳ ಡಿವೈಎಸ್ಪಿ ಶ್ರೀ ವೆಲೆಂಟೈನ್ ಡಿಸೋಜ ಹಾಗೂ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ರವರ ಮರ‍್ಗರ‍್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ನಂದ ಕುಮಾರ್ ನೇತೃತ್ವದ ಪೊಲೀಸ್ ತಂಡ ಕರ‍್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದರು
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ