
ಮಂಗಳೂರು: ಅಕ್ರಮವಾಗಿ ಪಿಕಪ್ ವಾಹನದಲ್ಲಿ ಮೂರು ದನ, ಎರಡು ಕರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದಾಗ ಭಜರಂಗದಳ ಸಂಘಟನೆ ಕರ‍್ಯರ‍್ತರು ತಡೆದ ಘಟನೆ ಇಂದು ನಸುಕಿನ ಜಾವ ಬೆಳ್ತಂಗಡಿ ಸಮೀಪ ನಡೆದಿದೆ. ಈ ವೇಳೆ ಗೋಸಾಗಾಟಗಾರರು ಇಬ್ಬರು ಭಜರಂಗದಳ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ:
ಪಿಕಪ್ ವಾಹನದಲ್ಲಿ ನಗರದ ಕಂಕನಾಡಿಯ ಪಿ.ಕೆ. ಚಿಕನ್ ಸೆಂಟರ್ ಹೆಸರಲ್ಲಿ ಪಡೆದ ಕೋವಿಡ್-೧೯ ಪಾಸ್ ಮೂಲಕ ಗೋಸಾಗಾಟ ನಡೆಯುತ್ತಿದ್ದು ಖಚಿತ ಮಾಹಿತಿ ಪಡೆದ ಭಜರಂಗದಳ ಕರ‍್ಯರ‍್ತರು ದಾಳಿ ನಡೆಸಿದ್ದಾರೆ. ದನಗಳನ್ನು ಬೆಳ್ತಂಗಡಿಯ ಸರ‍್ಯ ಪಡ್ಪುವಿನ ಮನೆಯೊಂದರಿಂದ ಸಾಗಿಸಲಾಗುತ್ತಿತ್ತು. ರಾಜೇಶ್ ಮತ್ತು ಆತನ ಸಹಚರರು ಈ ವೇಳೆ ತಲವಾರಿನಿಂದ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಪಿಕಪ್ ವಾಹನದೊಂದಿಗೆ ಬರುತ್ತಿದ್ದ ಬೆಂಗಾವಲು ವಾಹನದಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಮತ್ತೊಂದು ತಂಡವನ್ನು ಗುರುವಾಯನಕೆರೆ ಬಳಿ ತಡೆದು ನಿಲ್ಲಿಸಿದ್ದು ಆರೋಪಿಗಳು ಪರಾರಿಯಾಗಿದ್ದರೆ. ಹಲ್ಲೆಗೊಳಗಾದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ