May 19, 2024

Bhavana Tv

Its Your Channel

ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆ

ಮೂಡಬಿದಿರೆ: ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದ ಘಟನೆ ಮೂಡಬಿದಿರೆ ಬಡಗ ಮಿಜಾರು ಅರೆಮಜಲು ಪಲ್ಕೆಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಚಂದಯ್ಯ ಗೌಡ ಎಂಬುವರ ಪುತ್ರ ಉಮೇಶ್ ಗೌಡ ( 35) ಎಂದು ಗುರುತಿಸಲಾಗಿದೆ. ತಡರಾತ್ರಿ ಉಮೇಶ್ ಗೌಡನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಮರುದಿನ ಮಧ್ಯಾಹ್ನದ ವೇಳೆಗೆ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ

error: