April 24, 2024

Bhavana Tv

Its Your Channel

ಮೀನಿನ ವಾಹನದಲ್ಲಿ 12 ಟನ್ ಅಕ್ರಮ ಗೋ ಮಾಂಸ ಸಾಗಾಟ:ಇಬ್ಬರು ವಶಕ್ಕೆ ಪಡೆದ ಬಜರಂಗದಳದ ಕಾರ್ಯಕರ್ತರು

ಮಂಗಳೂರು: ಮೀನು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ತಂಡವನ್ನು ಇಂದು ಬೆಳಿಗ್ಗೆ ಮಂಗಳೂರಿನ ಪಂಪ್ ವೆಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟ್ರಕ್ ನಲ್ಲಿ ಗೋ ಮಾಂಸವನ್ನು ಸಾಗಾಟ ಮಾಡಲಾಗುತ್ತಿತ್ತು. ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಟ್ರಕ್ ನ್ನು ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಕಂಕನಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ. ಸುಮಾರು 12 ಟನ್ ಗೂ ಹೆಚ್ಚು ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ . ಕೆಲ ದಿನಗಳ ಹಿಂದೆ ಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಗುಂಪನ್ನು ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ತಡೆದು ವಶಕ್ಕೆ ಪಡೆಯಲಾಗಿತ್ತು

error: