April 20, 2024

Bhavana Tv

Its Your Channel

ಮಂಗಳೂರು : ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್‌ಐ ಆಗಿದ್ದ ೭ ತಿಂಗಳ ಗರ್ಭಿಣಿ ಕೋವಿಡ್‌ಗೆ ಬಲಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್‌ಐ ಆಗಿದ್ದ ಕೋಲಾರ ಮೂಲದ ಶಾಮಿಲಿ(೨೪) ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.
೭ ತಿಂಗಳ ಗರ್ಭಿಣಿಯಾಗಿದ್ದ ಅವರು, ಇತ್ತೀಚಿಗೆ ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ಮರಳಿದ್ದರು.ಅಲ್ಲಿ ಅವರಿಗೆ ಸೋಂಕು ಪತ್ತೆಯಾಗಿತ್ತು. ಮೇ ೨ ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ( ಮಂಗಳವಾರ) ಮುಂಜಾನೆ ೪:೩೦ ರ ಹೊತ್ತಿಗೆ ಮೃತಪಟ್ಟಿದ್ದಾರೆ.
೨೪ ವರ್ಷದ ಶಾಮಿಲಿ ಪ್ರೊಬೆಷನರಿ ಪಿಎಸ್ ಐ ಆಗಿ ಜನವರಿ ೧೧ ರಂದು ಮಂಗಳೂರು ಎಸ್ ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು., ಗರ್ಭಿಣಿಯಾಗಿದ್ದ ಕಾರಣ ಅವರು ಕೋವಿಡ್ ಲಸಿಕೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ.
ಶಾಮಿಲಿ ನಿಧನ ಹೊಂದಿರುವ ಕುರಿತು ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಈ ವೇಳೆ ಮನವಿ ಮಾಡಿದ್ದಾರೆ.

error: