April 19, 2024

Bhavana Tv

Its Your Channel

ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗೆ ಚಾಲನೆ

ರೋಣ: ಗ್ರಾಮೀಣ ಪ್ರದೇಶ ಜನರಿಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡುವ ಮಹತ್ತರವಾದ ಜಲ ಜೀವನ ಮಿಷನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದು ಯೋಜನೆಯ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಸಣ್ಣ ಕೈಗಾರಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಕಳಕಪ್ಪ ಬಂಡಿ ಹೇಳಿದರು.

ಜಿಗಳೂರು ಗ್ರಾಮದಲ್ಲಿ ೭೪.೯೫ ಲಕ್ಷದ ಮತ್ತು ಹೊಸಳ್ಳಿ ಗ್ರಾಮದಲ್ಲಿ ೫೭.೮೯ ಲಕ್ಷ ಮತ್ತು ಎರೆ ಕುರುಬನಾಳ ಗ್ರಾಮದಲ್ಲಿ ೧೩.೦೫ ಲಕ್ಷ ವೆಚ್ಚದ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿನ ಜನರಿಗೆ ಕುಡಿಯು ನೀರಿನ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಮಹತ್ತರವಾದ ಯೋಜನೆಯನ್ನು ಜಾರಿಗೆ ತಂದಿದೆ. ಕೇಂದ್ರದ ಶೇ.೩೭.೫೦ ರಾಜ್ಯ ಸರ್ಕಾರದ ಶೇ.೩೭.೫೦ ಗ್ರಾಮ ಪಂಚಾಯತಿಯ ೧೫ ನೇ ಹಣಕಾಸಿನ ಯೋಜನೆಯಡಿಯಲ್ಲಿ ಶೇ.೧೫ ಹಾಗೂ ಗ್ರಾಮ ವಂತಿಕೆಯಲ್ಲಿ ಶೇ.೧೦ ರಷ್ಟು ಸೇರಿ ಒಟ್ಟು ಶೇ. ೧೦೦ ರಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿನ ಪ್ರತಿಯೊಂದು ಮನೆ ಮನೆಗೂ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗುವುದು ಕೇಂದ್ರ ಸರ್ಕಾರವು ಬಡವರ ದೀನ ದಲಿತರ ಅಭಿವೃದ್ದಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಬಡಜನರಿಗೆ ಉಚಿತವಾಗಿ ಗ್ಯಾಸ್ ಸಿಲೆಂಡರ್ ದೊರೆಯಬೇಕು ಎಂಬ ನಿಟ್ಟಿನಲ್ಲಿ ಉಜ್ವಲ್ ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಮನೆ ಇಲ್ಲದವರಿಗೆ ಮನೆ ನಿರ್ಮಾಣ ಮಾಡಿದೆ. ಬಡವರ ಅಭಿವೃದ್ದಿಯೆ ನಮ್ಮ ಪಕ್ಷದ ಮುಖ್ಯ ಗುರಿಯಾಗಿದೆ. ಮುಂದಿನ ದಿನಮಾನಗಳಲ್ಲಿ ಸರ್ಕಾರದಿಂದ ಹೆಚ್ಚುವರಿ ಅನುದಾನವನ್ನು ತಂದು ಗ್ರಾಮದಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಜನರಿಗೆ ಸಮರ್ಪಕವಾಗಿ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೆನೆ ಎಂದರು
ಈ ಸಂದರ್ಭದಲ್ಲಿ ಹೊಳೆಆಲೂರ ಎಪಿಎಂಸಿ ಅಧ್ಯಕ್ಷರಾದ ರಾಜಣ್ಣ ಹೂಲಿ ಮುತ್ತು ಕಡಗದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಸಾತೇನಹಳ್ಳಿ ಗ್ರಾಮ ಪಂಚಾಯಿತಿ ಎಲ್ಲ ಸಿಬ್ಬಂದಿ ವರ್ಗ ಮತ್ತು ಪಿಡಿಒಗಳು ಉಪಸ್ಥಿತರಿದ್ದರು.
ವೀರಣ್ಣ ಸಂಗದ ರೋಣ

error: