December 21, 2024

Bhavana Tv

Its Your Channel

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ

ಗದಗ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರಾದ ಸಿ ಸಿ ಪಾಟೀಲರವರ ಆದೇಶದಂತೆ ಇಂದು ನರಗುಂದ ಮತಕ್ಷೇತ್ರದ ಹೊಳೆಆಲೂರ ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಯಚ್ಚರೇಶ್ವರ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಹೊಳೆಆಲೂರ ಮಂಡಲ ಬಿಜೆಪಿ ಪಕ್ಷದ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ದೈರ್ಯವನ್ನು ಹೇಳಲಾಯಿತು.
ಈ ಸಂದರ್ಭದಲ್ಲಿ ಹೊಳೆಆಲೂರ ಮಂಡಲ ಬಿಜೆಪಿ ಅಧ್ಯಕ್ಷರಾದ ಮುತ್ತಣ್ಣ ಜಂಗಣ್ಣವರ, ಪ್ರಧಾನ ಕಾರ್ಯದರ್ಶಿ ವೀರಸಂಗಯ್ಯಾ ಮೂಕಾಸಿ, ಗದಗ ಜಿಲ್ಲಾ ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಶರಣು ಚಲವಾದಿ, ಹೊಳೆ ಆಲೂರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಬೆಳವಣಕಿ, ಬಸವರಾಜ ಹಳ್ಳಿಕೇರಿ, ಕುಬೇರಗೌಡ ಪಾಟೀಲ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಶಾಲಾ ಸಿಬ್ಬಂದಿಗಳು, ಪೋಲಿಸರು ಉಪಸ್ಥಿತರಿದ್ದರು.
ವರದಿ ವೀರಣ್ಣ ರೋಣ

error: