ರೋಣ: ವ್ಯಕ್ತಿಯ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಶಾಸಕ ಕಳಕಪ್ಪ ಜಿ. ಬಂಡಿ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಜಿಗಳೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲಾದ ರೂ.೬೦. ಲಕ್ಷ ಮೊತ್ತದ ೫ ನೂತನ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾವಂತರಿಗೆ ತಮ್ಮ ಜೀವನ, ಜೀವನ ಶೈಲಿ ಬದಲಿಸಿಕೊಳ್ಳುವ ಸಾಮರ್ಥ್ಯವಿರುತ್ತದೆ. ಜೀವನವನ್ನು ಮುನ್ನೇಡೆಸಲು ಹಲವು ಅವಕಾಶಗಳು ಒದಗಿ ಬರುತ್ತವೆ ಅದಕ್ಕಾಗಿ ಪ್ರತಿಯೊಬ್ಬರು ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದರು. ಸರ್ಕಾರಿ ಶಾಲೆಗಳು ಸಮಾಜ ಸುಧಾರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತವೆ. ಅದರಲ್ಲೂ ನಮ್ಮ ತಾಲ್ಲೂಕಿನ ಸರ್ಕಾರಿ ಶಾಲೆಗಳು ಸಾಕಷ್ಟು ಮಕ್ಕಳಿಗೆ ವಿದ್ಯೆ ನೀಡಿದ್ದು, ಅವರೆಲ್ಲ ಜೀವನ ಸುಧಾರಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ರಾಜಣ್ಣ ಹೂಲಿ, ಅಶೋಕ ನವಲಗುಂದ, ಬಸವರಾಜ ಕೊಟಗಿ, ಮುತ್ತಣ್ಣ ಲಿಂಗನಗೌಡ್ರ ಹಾಗೂ ಶಾಲಾ ಸಿಬ್ಬಂದಿ ಇದ್ದರು.
ವರದಿ ವೀರಣ್ಣ ಸಂಗಳದ ರೋಣ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ