ರೋಣ: ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛ ಮಾಡುವ ಮೂಲಕ, ಬಣ್ಣ ಹಚ್ಚಿ ಅಂದ ಹೆಚ್ಚಿಸಿ ಜನರಿಗೆ ಜಾಗೃತಿ ಮೂಡಿಸುವುದು ನಮ್ಮ ಪಕ್ಷದ ಉದ್ದೇಶವಾಗಿದೆ ಎಂದು ರೋಣ ಮಂಡಲ ಬಿಜೆಪಿ ಅಧ್ಯಕ್ಷ ಮುತ್ತು ತೋಟಪ್ಪ ಕಡಗದ ಹೇಳಿದರು.
ಸೇವಾ ಸಮರ್ಪಣಾ ಅಭಿಯಾನದ ಅಂಗವಾಗಿ ರೋಣ ಮಂಡಲ ಬಿಜೆಪಿ ಯುವ ಮೋರ್ಚಾದ ಸದಸ್ಯರು ನಗರದ ಪುರಾತನ ಸೋಮಲಿಂಗೇಶ್ವರ ದೇವಾಲಯವನ್ನು ಸ್ವಚ್ಚಗೊಳಸಿ ಬಣ್ಣ ಹಚ್ಚಿದರು.
ಸಾಮಾನ್ಯ ಜನರು ದೇವಸ್ಥಾನ, ಬಸದಿಗಳ ಬಗ್ಗೆ ಪವಿತ್ರ ಭಾವನೆ ಹೊಂದಿರುತ್ತಾರೆ. ಆ ಜಾಗಗಳು ಮಲಿನವಾಗಲು ಜನರು ಬಿಡುವುದಿಲ್ಲ. ಗ್ರಾಮ ಸ್ವಚ್ಛವಾಗಿರಲು ಜನರಲ್ಲಿ ಸ್ವಚ್ಛತೆಯ ಪರಿಕಲ್ಪನೆ ಬರಬೇಕು.ಸೇವಾ ಸಮರ್ಪಣಾ ಅಂಗವಾಗಿ ಕಾರ್ಯಕರ್ತರು ಹಮ್ಮಿಕೊಂಡಿರುವುದು ಉತ್ತಮ ಕೆಲಸವಾಗಿದೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ರಾಜಣ್ಣ ಹೂಲಿ, ಮಲ್ಲಿಕಾರ್ಜುನ ಬಾಳಿಕಾಯಿ, ಪ್ರಕಾಶ, ಶಿವರಾಜ ಪಾಟೀಲ, ಪೃಥ್ವಿರಾಜ ಚೆನ್ನುಪಾಟೀಲ, ರವಿ ದೇಶಣ್ಣವರ, ಬಸವರಾಜ ಕೊಟಗಿ, ರಾಹುಲ್ ಅರಳಿ, ಕಳಕಪ್ಪ ಸೂಡಿ, ಸಿದ್ದೇಶ ಹೂಗಾರ ಇದ್ದರು.
ವರದಿ ವೀರಣ್ಣ ಸಂಗಳದ ರೋಣ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ