December 22, 2024

Bhavana Tv

Its Your Channel

ರೋಣ ತಾಲ್ಲೂಕಿನ ತಳ್ಳಿಹಾಳ ಗ್ರಾಮದಲ್ಲಿ ಅಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ರೋಣ ತಾಲ್ಲೂಕಿನ ತಳ್ಳಿಹಾಳ ಗ್ರಾಮದಲ್ಲಿ ಅಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರೋಣ ತಹಶೀಲ್ದಾರ ಜೆ. ಬಿ. ಜಕ್ಕನಗೌಡ್ರ, ಅಧಿಕಾರಿಗಳ ದಂಡು ಜನರ ಬಳಿಗೆ ಹೋಗಿ ಅವರ ಗ್ರಾಮದಲ್ಲಿಯೇ ವಾಸ್ತವ್ಯ ಮಾಡುವ ಮೂಲಕ ಸ್ಥಳೀಯವಾಗಿ ಇರುವ ಸಮಸ್ಯೆಗಳನ್ನು ಅರಿತು ಪರಿಹರಿಸಲು ಈ ಕಾರ್ಯಕ್ರಮ ಅನುಕೂಲವಾಗಲಿದೆ ಎಂದರು. ಆದಕಾರಣ ಸ್ಥಳೀಯ ಜನರು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳನ್ನು ಹೇಳಬೇಕು ಎಂದರು.
ರೈತರು ತಮ್ಮ ಹೊಲಗಳಿಗೆ ತೆರಳುವ ರಸ್ತೆ ದುರಸ್ತಿ, ಚರಂಡಿ ವ್ಯವಸ್ಥೆ, ಸಾರ್ವಜನಿಕ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳ ಅಹವಾಲುಗಳನ್ನು ಸಲ್ಲಿಸಿದರು. ನಂತರ ತಹಶೀಲ್ದಾರರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತ್ವರಿತ ಪರಿಹಾರಕ್ಕೆ ಸೂಚಿಸಿದರು.
ಗ್ರಾಪಂ ಅಧ್ಯಕ್ಷ ವೀರಣ್ಣಾ ಯಾಳಗಿ, ಉಪಾಧ್ಯಕ್ಷೆ ಪಾರ್ವತೆವ್ವಾ ಬಿಸಾಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಸಜ್ಜನ, ಹೇಸ್ಕಾಂ ಅಭಿಯಂತರ ಚೇತನ ಹಾದಿಮನಿ, ವೈದ್ಯಾಧಿಕಾರಿ ಡಾ. ರವೀಂದ್ರಕುಮಾರ ರಾಠೋಡ, ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ, ತಾ.ಪಂ. ಯೋಜನಾಧಿಕಾರಿ ಸಿ.ಎಸ್. ನೀಲಗುಂದ ಇದ್ದರು.

ವರದಿ ವೀರಣ್ಣ ಸಂಗಳದ ರೋಣ

error: