ರೋಣ: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಅದೇ ರೀತಿ ಮಕ್ಕಳನ್ನು ರಾಷ್ಟ್ರದ ನಿಜವಾದ ಶಕ್ತಿ ಮತ್ತು ಸಮಾಜದ ಅಡಿಪಾಯವೆಂದು ಪರಿಗಣಿಸಲಾಗಿದೆ ಸರಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾರಾದ ಸುಭಾಷ ನೀಲಗಾರ ಮಾತನಾಡಿದರು ಅವರು ಪಟ್ಟಣದ ಶ್ರೀ ಸಿದ್ರಾಮೇಶ್ವರ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾರತವು ೧೯೫೬ ರಿಂದ ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಿದೆ. ಚಾಚಾ ನೆಹರೂ ಮಕ್ಕಳೊಂದಿಗಿನ ಅವರ ಬಾಂಧವ್ಯ ಮತ್ತು ಒಲವಿನಿಂದ, ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನವಾಗಿ ಆಚರಿಸುವ ಮತ್ತು ಅವರ ಹಕ್ಕುಗಳಿಗಾಗಿ ಪ್ರತಿಪಾದಿಸುವ ದಿನವೆಂದು ಗುರುತಿಸಲಾಯಿತು. ಅಂದಿನಿAದ ಪ್ರತಿ ವರ್ಷ ನವೆಂಬರ್ ೧೪ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಮುತ್ತಣ್ಣ ಸಂಗಳದ, ಬಸವರಾಜ ದಿಂಡೂರ, ಪ್ರಶಾಂತ ಮಠದ.ಮುಖ್ಯೋಪಾಧ್ಯಾಯರಾದ ಸುನೀತಾ ಎಸ್ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಶಿಕ್ಷಕಿಯರು ಮಕ್ಕಳು ಎಲ್ಲರೂ ಉಪಸ್ಥಿತರಿದ್ದರು.
ವರದಿ ವೀರಣ್ಣ ಸಂಗಳದ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ