ರೋಣ ; ತಾಲ್ಲೂಕಿನ ತಳ್ಳಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನೆಯನ್ನು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ.ಎಸ್. ಪಾಟೀಲ ನಡೆಸಿದರು.
ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಜನತೆ ಬೇಸತ್ತು ಹೋಗಿದ್ದಾರೆ. ದಿನ ಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇ ಎರುತ್ತಿರುವುದರಿಂದ ಜನರ ಜೀವನ ತೀರಾ ಸಂಕಷ್ಟಕ್ಕೀಡಾಗಿದ್ದರೂ ಈ ಸರ್ಕಾರ ಜಾಣ ಕುರುಡರಂತೆ ವರ್ತಿಸುತ್ತಿದ ಎಂದು ಆಡಳಿತ ಪಕ್ಷದ ವಿರುದ್ಧ ಕಿಡಿ ಕಾರಿದರು.
ಈ ಸರ್ಕಾರದ ದುರಾಡಳಿತಕ್ಕೆ ಮುಂದಿನ ದಿನಮಾನ ಗಳಲ್ಲಿ ನಡೆಯುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂಬುದು ಶತ ಸಿದ್ಧ ಎಂದರು.
ಕಾರ್ಯಕ್ರಮದಲ್ಲಿ ಕೊತಬಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಈರಣ್ಣ ಯಾಳಗಿ, ಪರಸಪ್ಪ ಅಳಗವಾಡಿ, ಸಿದ್ದಣ್ಣ ಯಾಳಗಿ ಸೋಮು ನಾಗರಾಜ ಯಲ್ಲಪ್ಪ ಕೊಪ್ಪದ ಶಿವು ಹುಲ್ಲೂರ ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
ವರದಿ ; ವೀರಣ್ಣ ಸಂಗಳದ, ರೋಣ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ