May 15, 2024

Bhavana Tv

Its Your Channel

ರೋಣ ತಾಲೂಕು ಆಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ

ರೋಣ : ಪಟ್ಟಣದ ಗುರುಭವನದಲ್ಲಿ ತಾಲ್ಲೂಕು ಆಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಸಾಧನೆ ಶ್ಲಾಘನೀಯ.

ತಾಲೂಕ ಆಡಳಿತ, ತಾಲೂಕಾ ಪಂಚಾಯತ, ಹಾಗೂ ಸಮಾಜ ಕಲ್ಯಾಣ ಇಲಾಖೆ ರೋಣ, ಪುರಸಭೆ ಇಲಾಖೆ ಇವರಗಳ ಸಂಯುಕ್ತ ಆಶ್ರಯದಲ್ಲಿ ಇಂದು ಪಟ್ಟಣದ ಗುರು ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಅವರ 131 ನೇ ಹಾಗೂ ಡಾ.ಬಾಬು ಜಗಜೀವನರಾಮ್ ಅವರ 115 ನೇ ಜಯಂತ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಈ ವೇಳೆ ಶಾಸಕ ಕಳಕಪ್ಪ ಬಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ ಅವರು ಎಂದಿಗೂ ಸ್ಮರಣೀಯರು. ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಮತ್ತು ಅವರ ಸಮಾನತೆಗಳನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಟ ಅವರ ಸಾಧನೆ, ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಚರಿತ್ರಾರ್ಹ ಹಾಗೂ ಮಾಜಿ ಉಪ ಪ್ರಧಾನಿ ಜಗಜೀವನ ರಾಮ್ ಅವರು ಶೋಷಿತರ ಹಕ್ಕಿಗಾಗಿ ಹೋರಾಡಿದವರು, ಹಸಿರು ಕ್ರಾಂತಿಯ ಹರಿಕಾರ, ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಇಂದಿನ ಪೀಳಿಕೆಯವರು ಅವರ ತತ್ವ ಹಾಗೂ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಬಿ.ಎಸ.ಮಾನೇದ ಹಾಗು ಪುಂಡಲೀಕ ಮಾದರ ಅವರು ಮಹಿನಿಯರ ಕುರಿತು ಉಪನ್ಯಾಸ ಮಾಡಿದರು, ಈ ವೇಳೆ ಮುತ್ತಣ್ಣ ಕಡಗದ, ಮುತ್ತಣ್ಣ ಲಿಂಗನಗೌಡ್ರ, ಅಶೋಕ ನವಲಗುಂದ, ಬಸವೆಂತಪ್ಪ ತಳವಾರ, ತಹಶೀಲ್ದಾರ ಜಿ.ಬಿ.ಜಕ್ಕನಗೌಡ್ರ, ಪುರಸಭೆ ಅಧ್ಯಕ್ಷೆ ರಂಗವ್ವ ಭಜಂತ್ರಿ, ಪಡಿಯಪ್ಪ ಪೂಜಾರ, ಸಂಜಯ್ಯ ದೊಡ್ಡಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಸಜ್ಜಣ, ಉಪನೊಂದಣಾಧಿಕಾರಿ ಸಲ್ಮಾ ಕಣವಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಭೀಮಾಶಂಕರ ಬಿರಾದಾರ, ಸಿ.ಪಿ.ಐ ಸುಧೀರ ಬೆಂಕಿ, ಪಿ.ಎಸ.ಐ ವಿನೋಧ ಪೂಜಾರ, ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಸಮಾಜದ ಮುಖಂಡರು, ತಾಲೂಕ ಮಟ್ಟದ ಅಧಿಕಾರಿಗಳೂ ಮುಂತಾದವರು ಉಪಸ್ಥಿತರಿದ್ದರು

ವರದಿ: ವೀರಣ್ಣ ಸಂಗಳದ

error: