ರೋಣ :-ನಿಡಗುಂದಿ ಗ್ರಾಮದಲ್ಲಿ ರಸ್ತೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಅದರಲ್ಲೂ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
೨ ಕೋಟಿ ವೆಚ್ಚದ ನಿಡಗುಂದಿ ಗ್ರಾಮದಿಂದ ಸೂಡಿ ವರೆಗೆ ಸುಮಾರು ೭ ಕಿಲೋಮೀಟರ್ ವ್ಯಾಪ್ತಿಯ ಸಿ,ಸಿ, ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದರು. ರಸ್ತೆ, ಕುಡಿಯುವ ನೀರು, ನೀರಾವರಿ ಸೇರಿದಂತೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿರುವ ನಿಡಗುಂದಿ ಸೂಡಿ ರಸ್ತೆ ಆದಷ್ಟು ಬೇಗ ಸಂಚಾರಕ್ಕೆ ಮುಕ್ತವಾಗಲಿದೆ’ ಎಂದರು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಯವರ ಕನಸು ಕೂಡಾ ದೇಶದ ಅಭಿವೃದ್ಧಿ ಮೂಲ ಉದ್ದೇಶವಾಗಿದ್ದು ಸಾಕಷ್ಟು ಅನುದಾನ ಕೂಡಾ ನೀಡುತ್ತಿದ್ದು, ನಗರ ಅಷ್ಟೇ ಅಲ್ಲದೇ ಗ್ರಾಮೀಣ ಭಾಗದ ರಸ್ತೆ ದುರಸ್ತಿಗಳು ಕೂಡಾ ನಡೆಯುತ್ತಿವೆ.ಹಂತ ಹಂತವಾಗಿ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ನಿಡಗುಂದಿಕೊಪ್ಪದ ಶ್ರೀಗಳು, ರೋಣ ಮಂಡಳ ಬಿಜೆಪಿ ಅಧ್ಯಕ್ಷ ಮುತ್ತಣ್ಣ ಕಡಗದ, ಗ್ರಾಮ ಪಂಚಾಯತ ಸದಸ್ಯರಾದ ಜಗದೀಶ್ ಕರಡಿ,ಹನುಮಂತಪ್ಪ ಸೂಡಿ, ಹಾಗೂ ಕಾರ್ಯಕರ್ತರು ಇದ್ದರು.
ವರದಿ ವೀರಣ್ಣ ಸಂಗಳದ ರೋಣ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ