ರೋಣ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಸರಳ ವಿವಾಹಗಳು ಸಹಕಾರಿಯಾಗಲಿವೆ ಎಂದು ಅಬ್ಬಿಗೇರಿ ಗ್ರಾಮದ ಯಲ್ಲಾಲಿಂಗೇಶ್ವರ ಸಂಸ್ಥಾನ ಮಠದ ಬಸವರಾಜ ಶರಣರು ಸ್ವಾಮೀಜಿ ಹೇಳಿದರು.
ದಿವ್ಯ ಸಾನಿದ್ಯ ವಹಿಸಿ ಗಬ್ಬೂರ ತಾತನವರು ಶ್ರೀ ಕ್ಷೇತ್ರ ಗೊನವಾರ ಅವರ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಅನೇಕರು ತಮ್ಮ ಪ್ರತಿಷ್ಠೆ ಪ್ರದರ್ಶಿಸಲು ಸಾಲ ಮಾಡಿ ಆಡಂಬರದ ವಿವಾಹ ನಡೆಸುತ್ತಾರೆ. ಇದರ ಬದಲು ಸರಳ ರೀತಿಯಲ್ಲಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿ ಎಲ್ಲಾ ಸಮಾಜದ ಗುರು ಹಿರಿಯರ ಆಶೀರ್ವಾದ ಪಡೆದರೆ ಒಳ್ಳೆಯದು ಎಂದರು. ಸಮಾಜದ ಸ್ವಾಸ್ಥ್ಯ ಕಾಪಾಡಲು ಹಾಗೂ ಸಾಮರಸ್ಯದಿಂದ ಬದುಕಲು ಇಂತಹ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ಹೇಳಿದರು.
ಶಂಕರಾನAದ ಸ್ವಾಮಿಗಳು ಮಾತನಾಡಿ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವ ದಂಪತಿಗಳು ಇತರರಿಗೆ ಆದರ್ಶಪ್ರಾಯರಾಗುವಂತೆ ಜೀವನ ಸಾಗಿಸಬೇಕು. ಇಂತಹ ಮದುವೆಗಳು ಸಾಕಷ್ಟು ನಡೆಯುವ ಮೂಲಕ ಸಮಾಜದಲ್ಲಿ ಸಾಮರಸ್ಯ ಹೆಚ್ಚಿಸುವ ಕಾರ್ಯವಾಗಬೇಕು ಎಂದರು
ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಎಸ್ ರಡ್ಡೇರ್ ಮಾತನಾಡಿ ನವ ದಂಪತಿಗಳು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೀಡುವುದರ ಮೂಲಕ ಅವರ ಅನ್ಯೋನ್ಯವಾಗಿ ಜೀವನ ಸಾಗಿಸಬೇಕು. ಜೀವನದಲ್ಲಿ ಧರ್ಮ, ಸಂಸ್ಕಾರ, ಸಂಸ್ಕೃತಿಗಳನ್ನು ಅಳವಡಿಸಿಕೊಳ್ಳಬೇಕುಎಂದು ಹೇಳಿದರು
ಇದೇ ಸಂದರ್ಭದಲ್ಲಿ ಅಣ್ಣಪ್ಪ ಗೌಡ, ದೇಸಾಯಿ ರಾಜ್ಯ ಸಂಘಟನಾ ಕಾರ್ಯದರ್ಶಿ ದೇವಪ್ಪ ಹುನಗುಂದ, ತಾಲ್ಲೂಕು ಅಧ್ಯಕ್ಷರು ಬಸವರಾಜ ಮಲ್ಲಾಪುರ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರು, ಅಬ್ಬಿಗೇರಿ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಉಪಸ್ಥಿತರಿದ್ದರು
ವರದಿ: ವೀರಣ್ಣ ಸಂಗಳದ
More Stories
ಶಿಕ್ಷಕರು ಎಂದರೆ ದೇವರ ಪ್ರತಿರೂಪ ಬದುಕು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ- ಗುರುಪಾದ ಮಹಾಸ್ವಾಮಿಜೀ
ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು.
ಮತದಾರರ ಋಣ ತೀರಿಸುವ ಪರಿಕಲ್ಪನೆಯೊಂದಿಗೆ ಕಾರ್ಯನಿರ್ವಹಿಸಿ- ಸಚಿವ ಸಿ.ಸಿ.ಪಾಟೀಲ