December 22, 2024

Bhavana Tv

Its Your Channel

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಮೇಲೆ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ಗದಗ :-ಜಿ.ಎಸ್.ಪಾಟೀಲ್ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರ ನ್ಯಾಯಾಂಗ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಇ ಡಿ ಅಧಿಕಾರಿಗಳ ಮುಖಾಂತರ ದ್ವೇಷದ ರಾಜಕಾರಣ ಮಾಡುತ್ತಿರುವ ಬಿಜೆಪಿ ಸರಕಾರದ ನಡೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಉಸ್ತುವಾರಿಗಳು ಹಾಗೂ ಮಾಜಿ ಶಾಸಕರಾದ ಹಸನಸಾಬ ದೊಟಿಹಾಳ, ಮಾಜಿ ಶಾಸಕರಾದ ಡಿ ಆರ್ ಪಾಟೀಲ್, ಬಿ ಆರ್ ಯಾವಾಗಲ, ಜಿ ಎಸ್ ಗಡ್ಡದೇವರಮಠ, ಶ್ರೀಶೈಲಪ್ಪ ಬಿದರೂರ, ರಾಮಕೃಷ್ಣ ದೊಡ್ಡಮನಿ, ಬಸವರಾಜ ಗುರಿಕಾರ, ಮಿಥುನ್ ಜಿ ಪಾಟೀಲ ಸೇರಿದಂತೆ ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಜಿಲ್ಲೆಯ ಕೆಪಿಸಿಸಿ ಸದಸ್ಯರುಗಳು, ಎಲ್ಲ ಬ್ಲಾಕ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಸೇರಿದಂತೆ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ವೀರಣ್ಣ ಸಂಗಳದ

error: