March 29, 2024

Bhavana Tv

Its Your Channel

ಗ್ರಾಮ ಒನ್ ಯೋಜನೆಗೆ ಚಾಲನೆ ನೀಡಿದ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಹಾವೇರಿ : ಒಂದೇ ಸೂರಿನಡಿಯಲ್ಲಿ ಸರಕಾರದ ಎಲ್ಲಾ ಇಲಾಖೆಯ ಸೇವೆಯನ್ನು ಗ್ರಾಮೀಣ ಭಾಗದ ನಾಗರಿಕರಿಗೆ ಒದಗಿಸಲು ” ಗ್ರಾಮ ಒನ್ ಯೋಜನೆಯನ್ನು ” ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಪ್ರಾಯೋಗಿಕವಾಗಿ ಚಾಲನೆ ನೀಡಿದರು.

ಕಾರ್ಮಿಕ ಇಲಾಖೆಯ ಸಚಿವರು,ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರವರು ಹಾವೇರಿ ಜಿಲ್ಲೆಯ ಎನ್.ಎಂ.ತಡಸ ಗ್ರಾಮದಲ್ಲಿ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ” ಗ್ರಾಮ ಒನ್ ಗೆ ” ಚಾಲನೆ ನೀಡಿ, ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಯ ಆದೇಶ ಪತ್ರವನ್ನು ವಿತರಿಸಿ, ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಎನ್.ಎಮ್.ತಡಸ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಅಧಿಕಾರಿಗಳು ಉಪಸ್ಥಿತರಿದ್ದರು

error: