March 25, 2024

Bhavana Tv

Its Your Channel

ಹಾವೇರಿಯ ಜಿಲ್ಲಾಧಿಕಾರಿಗಳ ನೂತನ ಕಾರ್ಯಾಲಯದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಶಿವರಾಮ ಹೆಬ್ಬಾರ

ಹಾವೇರಿ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರರವರು ಹಾವೇರಿಯ ಜಿಲ್ಲಾಧಿಕಾರಿಗಳ ನೂತನ ಕಾರ್ಯಾಲಯದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ( ಕೆ.ಡಿ.ಪಿ ) ನಡೆಸಿದರು.

ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು
ಅಧಿಕಾರಿಗಳಿಂದ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದರು ಹಾಗೂ ಇಲಾಖೆವಾರು ಪ್ರಗತಿಯ ಕುರಿತು ಪ್ರತ್ಯೇಕ ಸಭೆ ನಡೆಸಿ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ, ಶಾಸಕರಾದ ನೆಹರು ಓಲೇಕಾರ, ವಿರೂಪಾಕ್ಷ ಬಳ್ಳಾರಿ, ಅರುಣಕುಮಾರ ಪೂಜಾರ ಹಾಗೂ ವಿಧಾನಪರಿಷತ ಸದಸ್ಯರಾದ ಪ್ರದೀಪ ಶೆಟ್ಟರ, ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

error: