ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಕಂದಾಯ ಇಲಾಖೆಗೆ ನೂತನವಾಗಿ ನೇಮಕಗೊಂಡಿರುವ ಶ್ರೀದೇವಿ ರವರಿಗೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸನ್ಮಾನಿಸಿ ಸ್ವಾಗತಿಸಲಾಯಿತು
ಈ ಸಂದರ್ಭದಲ್ಲಿ ಕರವೇ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ರಾಮನಳ್ಳಿ ಪ್ರವೀಣ್ ಮಾತನಾಡಿ ಶನಿವಾರಸಂತೆ ಹೋಬಳಿಗೆ ತಾವುಗಳು ನೇಮಕವಾಗಿರುವುದು ತುಂಬಾ ಸಂತೋಷಕರ ವಿಷಯ ಎಂದು ತಿಳಿಸಿದರು
ಈ ಪ್ರದೇಶ ಹಳ್ಳಿಗಾಡುಗಳಿಂದ ಕೂಡಿರುತ್ತದೆ ಇಲ್ಲಿ ಬಡವರ ಹೆಚ್ಚಾಗಿರುವುದರಿಂದ ಬಡವರ ಪರ ಹೆಚ್ಚು ಒಲವು ತೋರಿಸಿ ತಾವುಗಳು ಕೆಲಸ ಮಾಡಬೇಕಾಗಿ ವಿನಂತಿಸಿದರು
ಇದೇ ಸಂದರ್ಭದಲ್ಲಿ ಶನಿವಾರಸಂತೆ ಹೋಬಳಿ ಮಹಿಳಾ ಘಟಕದ ಅಧ್ಯಕ್ಷರಾದ ಕುಸುಮ ರವರು ಉಪ ತಹಸೀಲ್ದಾರ್ ರವರಿಗೆ ಶಾಲು ಹೊದಿಸಿ ಸನ್ಮಾನಿಸಿದರು ..
ಈ ಸಂದರ್ಭದಲ್ಲಿ ಕರವೇ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ಹಾಗೂ ಕರವೇ ಸೋಮವಾರಪೇಟೆ ತಾಲ್ಲೂಕು ಕಾರ್ಯದರ್ಶಿ ರಾಮನಹಳ್ಳಿ ಪ್ರವೀಣ್ ಹಾಗೂ ಶನಿವಾರಸಂತೆ ಹೋಬಳಿ ಮಹಿಳಾ ಘಟಕದ ಅಧ್ಯಕ್ಷರಾದ ಕುಸುಮಾ ಹಾಗೂ ರಂಜಿತ್ ಉಪಸ್ಥಿತರಿದ್ದರು
More Stories
ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೇರೆದ ಕರವೇ ಫ್ರಾನ್ಸಿಸ್ ಡಿಸೋಜಾ.
ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಬಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಕರವೇ ತಾಲೂಕು ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ
ಗೌಡಳ್ಳಿ ಗ್ರಾಮ ಪಂಚಾಯಿತಿ ಮುಂದೆ ಉದ್ಯಾನವನದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಶಿವರಾಮೇಗೌಡರ ಕರವೇ ಕಾರ್ಯಕರ್ತರಿಂದ ಮನವಿ