April 24, 2024

Bhavana Tv

Its Your Channel

ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ನಿಧನ

ಕೋಲಾರ (ಡಿ. 17) : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆರ್ ಎಲ್ ಜಾಲಪ್ಪ ಇಂದು(ಶುಕ್ರವಾರ) ಸಂಜೆ ಅವರು ಚಿಕಿತ್ಸೆ ಫಲಕಾರಿಯಾದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶ, ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಜಾಲಪ್ಪ ಅವರು ಕಳೆದ 41 ದಿನಗಳಿಂದ ತೀರ್ವನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಸಾವಿಗೆ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಬಿಜೆಪಿ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅಂತಿಮ ದರ್ಶನಕ್ಕೆ ವ್ಯವಸ್ಥೆ
ಹಿರಿಯ ಕಾಂಗ್ರೆಸ್ ನಾಯಕರ ಅಂತಿಮ ದರ್ಶನಕ್ಕೆ ವ್ಯವಸ್ಥೆಗೆ ಜಿಲ್ಲಾಡಳಿತ ಸಿದ್ದತೆ ನಡೆಸಿದೆ. ಆಸ್ಪತ್ರೆಯ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅವರ ಅಂತಿಮ ದರ್ಶನಕ್ಕೆ ದೇವರಾಜು ಅರಸು ಮೆಡಿಕಲ್ ಕಾಲೇಜಿನಲ್ಲಿ ವ್ಯವಸ್ಥೆ ನಡೆಲಾಗಿದೆ.
ಪಾರ್ಶ್ವವಾಯುಗೆ ತುತ್ತಾಗಿದ್ದ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತು. ಕಳೆದ 40 ದಿನಗಳಿಂದಲೂ ಅವರು ಕೋಲಾರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದ್ದು, ಅವರ ಆರೋಗ್ಯ ಸ್ಥಿತಿ ಬಿಗಾಡಾಯಿಸಿತ್ತು.
ಕಳೆದ ನಾಲ್ಕು ದಿನಗಳ ಹಿಂದೆ ಅಂದರೆ ಡಿ. 12 ರಂದು ಕೋಲಾರದಲ್ಲಿ ಅವರು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ , ಜಾಲಪ್ಪ ಅವರ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದರು.
ಆರ್ ಎಲ್ ಜಾಲಪ್ಪ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಪ್ರತಿನಿಧಿಸಿ ಜಾಲಪ್ಪ ಅವರು ಕಾಂಗ್ರೆಸ್ ಸರಕಾರದಲ್ಲಿ ಕೇಂದ್ರ ಜವಳಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ ಅವರು ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ಅವರೊಂದಿಗೆ ಕರ್ನಾಟಕ ಕ್ರಾಂತಿ ರಂಗವನ್ನು ರಚಿಸಲು ಪಕ್ಷಕ್ಕೆ ರಾಜೀನಾಮೆ ನೀಡಿದರು. ನಂತರ ಜನತಾ ಪಕ್ಷದೊಂದಿಗೆ ವಿಲೀನಗೊಂಡರು.

error: