June 22, 2021

Bhavana Tv

Its Your Channel

ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಕೆ ಅನ್ನದಾನಿ ಚಾಲನೆ

ಮಳವಳ್ಳಿ : ಅಭಿವೃದ್ಧಿ ಕಾಮಗಾರಿಯಲ್ಲಿ ತೀರ ಹಿಂದುಳಿದಿರುವ ಮಳವಳ್ಳಿ ತಾಲ್ಲೂಕಿನ ದೇಶುವಳ್ಳಿ ಗ್ರಾಮದಲ್ಲಿ ಸುಮಾರು ೨೫ ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಕೆ ಅನ್ನದಾನಿ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವರೆವಿಗೂ ಅಭಿವೃದ್ಧಿಯನ್ನೇ ಕಾಣದ ದೇಶುವಳ್ಳಿ ಗ್ರಾಮದ ರಸ್ತೆ ಚರಂಡಿಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಇರುವುದು ನನ್ನ ಗಮನಕ್ಕೆ ಬಂದಿದ್ದು ಇಡೀ ಗ್ರಾಮದ ರಸ್ತೆ ಚರಂಡಿಗಳ ಪುನರ್ ನಿರ್ಮಾಣಕ್ಕೆ ಮೊದಲ ಹಂತವಾಗಿ ೨೫ ಲಕ್ಷ ರೂಗಳನ್ನು ಬಿಡುಗಡೆ ಮಾಡಿದ್ದು ಇದರ ಬೆನ್ನಲ್ಲೇ ಗ್ರಾಮಕ್ಕೆ ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಕರೋನ ಹಾವಳಿಯಿಂದಾಗಿ ಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದವಾದರೂ ಇನ್ನು ಮುಂದೆ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸುವುದಾಗಿ ತಿಳಿಸಿದ ಅವರು ಈಗಾಗಲೇ ಒಂದು ಕೋಟಿ ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿ ಪಂ ಸದಸ್ಯರಾದ ಹನುಮಂತು. ತಾ ಪಂ ವಿರೋಧಿ ಪಕ್ಷದ ನಾಯಕ ನಟೇಶ್, ಸೇರಿದಂತೆ ಲೋಕೋ ಪ ಯೋಗಿ ಇಲಾಖೆಯ ಅಧಿಕಾರಿಗಳು ಹಲವಾರು ಮುಖಂಡರು ಹಾಜರಿದ್ದರು.

ವರದಿ : ಬಿ ಮಲ್ಲಿಕಾರ್ಜುನಸ್ವಾಮಿ, ಮಳವಳ್ಳಿ.

error: