April 25, 2024

Bhavana Tv

Its Your Channel

ಈಜಲು ಹೋಗಿದ್ದ ಯುವಕರಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಜಲಸಮಾಧಿ

ಕೃಷ್ಣರಾಜಪೇಟೆ ; ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಮೋದೂರು ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿ ನೀರಿನಲ್ಲಿ ಮುಳುಗಿದ್ದ ದೇಹಗಳನ್ನು ಪತ್ತೆ ಮಾಡಿ ದಡಕ್ಕೆ ತಂದು ಮೃತರ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಗ್ರಾಮದ ದಲಿತ ಮುಖಂಡ ರಮೇಶ್ ಅವರ ಪುತ್ರ ರಾಜು(೧೯)ಮತ್ತು ನಯನಜ ಕ್ಷತ್ರಿಯ ಸಮಾಜಕ್ಕೆ ಸೇರಿದ ರಮೇಶ್ ಅವರ ಪುತ್ರ ಪ್ರದೀಪ(೨೧) ಅವರ ಅಕಾಲಿಕ ನಿಧನಕ್ಕೆ ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ.


ಕೃಷ್ಣರಾಜಪೇಟೆ ಗ್ರಾಮಾಂತರ ಠಾಣೆಯ ಪೋಲಿಸ್ ಇನ್ಸ್ಪೆಕ್ಟರ್ ಕೆ.ಎಸ್.ನಿರಂಜನ ಸ್ಥಳಕ್ಕೆ ಭೇಟಿ ನೀಡಿ ಕೆರೆಯ ಬಳಿ ಜನರು ಗುಂಪು ಸೇರದಂತೆ ತಡೆದು ಮೃತರಾದ ಯುವಕರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು..
ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜಲಸಮಾಧಿಯಾಗಿರುವ ಬಗ್ಗೆ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಯುವಕರಿಬ್ಬರೂ ಬಡಕುಟುಂಬಗಳಿಗೆ ಸೇರಿದವರಾಗಿದ್ದು ತೀವ್ರವಾದ ಆರ್ಥಿಕ ಸಂಕಷ್ಠದಲ್ಲಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಡಾ.ನಾರಾಯಣಗೌಡ ಅವರು ಪರಿಹಾರ ಧನವನ್ನು ಕೊಡಿಸಿಕೊಟ್ಟು ಸಹಾಯ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಇಬ್ಬರೂ ಯುವಕರ ಮೃತ ದೇಹಗಳನ್ನು ಶವಗಳ ಮರಣೋತ್ತರ ಪರೀಕ್ಷೆಗಾಗಿ ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ತಂದೆತಾಯಿಗಳಿಗೆ ಹಸ್ತಾಂತರಿಸಿದರು..
ಮೋದೂರು ಗ್ರಾಮದಲ್ಲಿ ಮೃತ ಯುವಕರ ಅಂತ್ಯಸAಸ್ಕಾರ ನಡೆಯಿತು.. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಈಜಲು ಹೋಗಿ ಮೃತರಾದ ಪ್ರದೀಪ ಮತ್ತು ರಾಜು ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ ಸೂಕ್ತ ಪರಿಹಾರವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು.

ವರದಿ. ಡಾ.ಕೆ.ಆರ್.ನೀಲಕಂಠ.ಕೃಷ್ಣರಾಜಪೇಟೆ. ಮಂಡ್ಯ.

error: