November 9, 2024

Bhavana Tv

Its Your Channel

ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಕೇಂದ್ರ ಸರ್ಕಾರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರಿಗೆ ಶ್ರದ್ದಾಂಜಲಿ

ಕೆ.ಆರ್.ಪೇಟೆ: ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಇಂದು ನಿಧನರಾದ ಕೇಂದ್ರ ಸರ್ಕಾರದ ಮಾಜಿ ಸಚಿವರು, ಕೇಂದ್ರ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷರಾದ ಎಂ.ವಿ.ರಾಜಶೇಖರನ್ ಅವರಿಗೆ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಶ್ರದ್ದಾಂಜಲಿ ಸಲ್ಲಿಸಲಾಯಿತು.


ಶ್ರದ್ದಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ವಿ.ಎಸ್.ಧನಂಜಯ ಅವರು ಮಾತನಾಡಿ ನಾಡು ಕಂಡ ಸರಳ, ಸಜ್ಜನ, ಪ್ರಾಮಾಣಿಕ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಎಂ.ವಿ.ರಾಜಶೇಖರನ್ ಅವರು ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ, ರಾಜ್ಯಸಭಾ ಸದಸ್ಯರಾಗಿ ಪ್ರಧಾನಿಗಳಾಗಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರಲ್ಲಿ ಕೇಂದ್ರ ಸಚಿವರಾಗಿ ಉತ್ತಮವಾಗಿ ಸೇವೆ ಸಲ್ಲಿಸಿದ್ದರು. ಇಂತಹ ಹಿರಿಯ ಮಹಾನ್ ರಾಜಕಾರಣಿಯ ನಿಧನದಿಂದ ಕನ್ನಡ ನಾಡಿಗೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ವಿ.ಎಸ್.ಧನಂಜಯ ಅವರು ತಿಳಿಸಿದರು. ಇವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರ ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸಿದರು.
ನಾಡಿನ ಕೆಲವೇ ಕೆಲವು ಶ್ರೇಷ್ಠ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಎಂ.ವಿ.ರಾಜಶೇಖರನ್ ಅವರು ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಅಳಿಯ ಎಂಬುದು ವಿಶೇಷವಾಗಿದೆ. ಇಂತಹ ಅತ್ಯುತ್ತಮ ಹಿರಿಯ ಚೇತನದ ಅಗಲಿಕೆಯಿಂದ ಕನ್ನಡನಾಡು ಬಡವಾಗಿದೆ ಎಂದು ಅಭಿಪ್ರಾಯಪಟ್ಟರು.
ತಾಲ್ಲೂಕು ಪಂಚಾಯಿತಿ ಸದಸ್ಯ ಮಾಧವಪ್ರಸಾದ್, ಮುಖಂಡರಾದ ಅಕ್ಕಿಹೆಬ್ಬಾಳು ಶ್ಯಾಮಿಯಾನ ಮಹೇಶ್, ಮೆಳ್ಳಹಳ್ಳಿ ಅಚ್ಯುತ, ಚೋಕನಹಳ್ಳಿ ಪ್ರಕಾಶ್, ಮಹೇಶ್ ಇತರರು ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಎಂ.ವಿ.ರಾಜಶೇಖರನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಲ್ಲಿಸಿದರು.

error: